ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ: ಶರಣ ಪ್ರಕಾಶ್ ಪಾಟೀಲ್
ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ: ಶರಣ ಪ್ರಕಾಶ್ ಪಾಟೀಲ್ ನಾಗಮಂಗಲ :ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ೨೦೨೫ನೇ ಸಾಲಿನ ವೈದ್ಯಕೀಯ ಮತ್ತು ಅನ್ವಯಿಕ ಆರೋಗ್ಯ ವಿಜ್ಞಾನಗಳ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಭವ್ಯವಾಗಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾತನಾಡಿ ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳ ಪರಿಶ್ರಮದ ಫಲವಾಗಿ ಸ್ಥಾಪನೆಯಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಈ ಮಠವನ್ನು ಪೂಜ್ಯ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಂತಹ ಕ್ಷೇತ್ರದಲ್ಲಿ ಓದುತ್ತಿರುವುದು ನಿಮಗೆ ಶ್ರೇಷ್ಠ ಅವಕಾಶ ಹಾಗೂ ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠವು ಮಾಡುತ್ತಿರುವುದು ಹೆಮ್ಮೆ ಪಡುವ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು ಇದೇ ಸಂದರ್ಭದಲ್ಲಿ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯವು ಹೊರತಂದಿರುವ ಅಂಕಣ ಬರಹದ ಹೊತ್ತಿಗೆಗಳನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ…
ಮುಂದೆ ಓದಿ..
