ಅಡುಗೆ…….
ಅಡುಗೆ……. ರುಚಿ – ತೃಪ್ತಿ – ಸಮಾನತೆ….. ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ…. ಮನುಷ್ಯ ಬದುಕಿನ ಜೀವದ್ರವ್ಯಗಳಲ್ಲಿ ಗಾಳಿ ಮತ್ತು ನೀರಿನ ನಂತರ ಆಹಾರವೇ ಅತ್ಯಂತ ಪ್ರಮುಖವಾದದ್ದು. ಹಿಂದೆ ಅನಾಗರಿಕ ಮಾನವ ಗೆಡ್ಡೆ, ಗೆಣಸು, ಹಣ್ಣು, ಹಂಪಲು, ಪ್ರಾಣಿ, ಪಕ್ಷಿ, ಕೀಟಗಳನ್ನು ತಿಂದು ಬದುಕುತ್ತಿದ್ದ. ದಿನಗಳೆದಂತೆ ಮನುಷ್ಯನ ಅನಿವಾರ್ಯತೆಗಳು, ಅಗತ್ಯಗಳು, ಆಸೆಗಳು, ದುರಾಸೆಗಳುಜೊತೆಗೆ ಆತನ ನಾಲಿಗೆ ರುಚಿಬಯಸತೊಡಗಿತು ಮತ್ತು ಅದಕ್ಕೆ ತಕ್ಕಂತೆ ಅವಕಾಶಗಳು ಒದಗಿ ಬಂದವು. ನಿರ್ದಿಷ್ಟವಾಗಿ ಹಣ್ಣು, ತರಕಾರಿ, ಪ್ರಾಣಿ, ಪಕ್ಷಿಗಳನ್ನು ಅನುಭವದ ಆಧಾರದ ಮೇಲೆಯೇ ಗುರುತಿಸಿ ಆಹಾರವನ್ನಾಗಿ ಉಪಯೋಗಿಸ ತೊಡಗಿದ. ಕೊನೆಗೆ ಈ 2025 ರಲ್ಲಿ ನಿಂತು ಹಿಂತಿರುಗಿ ನೋಡಿದಾಗ ಆಹಾರಗಳ ವೈವಿಧ್ಯತೆ ಕಲ್ಪನೆಗೂ ಮೀರಿ ಬೆಳೆದಿದೆ. ದಕ್ಷಿಣದಿಂದ ಉತ್ತರದವರೆಗೂ, ಪೂರ್ವದಿಂದ ಪಶ್ಚಿಮದವರೆಗೂ ಇಡೀ ದೇಶದ ಆಹಾರ ವಿಭಿನ್ನತೆ ಚಕಿತಗೊಳಿಸುತ್ತದೆ. ನಮ್ಮ ದೇಶದಲ್ಲಿ ಹಳ್ಳಿ, ಪಟ್ಟಣ, ನಗರ,ಮೆಟ್ರೋಪಾಲಿಟಿನ್ ಸಿಟಿ ಸೇರಿ…
ಮುಂದೆ ಓದಿ..
