ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ…….
ಟಿ ವಿ ಧಾರಾವಾಹಿಗಳಲ್ಲಿ ಅತ್ತೆ ಸೊಸೆಗೆ ತೊಂದರೆ ಕೊಡುವುದನ್ನು ನೋಡಿ ಕಣ್ಣೀರಾಗುವಿರಿ,ಆದರೆ ನಿಮ್ಮ ಮನೆಯ ಅದೇ ವಾತಾವರಣವನ್ನು ಮರೆಯುವಿರಿ……. ಸಿನಿಮಾದಲ್ಲಿ ನಾಯಕ ಭ್ರಷ್ಟ ರಾಜಕಾರಣಿಗಳನ್ನು ಚಚ್ಚುವುದು ನೋಡಿ ಸಿಳ್ಳೆ ಹೊಡೆಯುವಿರಿ,ಆದರೆ ನಿಜ ಜೀವನದಲ್ಲಿ ಅದೇ ರಾಜಕಾರಣಿಗಳ ಹಿಂಬಾಲಕರಾಗಿರುವಿರಿ……. ಕಥೆಗಳಲ್ಲಿ ಇಡೀ ಬದುಕನ್ನೇ ಇತರರಿಗಾಗಿ ತ್ಯಾಗ ಮಾಡುವ ಪಾತ್ರಗಳಲ್ಲಿ ನಿಮ್ಮನ್ನೇ ಕಲ್ಪಿಸಿಕೊಳ್ಳುತ್ತೀರಿ,ಆದರೆ ವಾಸ್ತವದಲ್ಲಿ ಎಲ್ಲವೂ ನನಗೇ ಇರಲಿ ಎಂದು ದುರಾಸೆ ಪಡುವಿರಿ.ಪತ್ರಿಕೆ, ಟಿವಿಗಳಲ್ಲಿ ವೃದ್ದ ತಂದೆ ತಾಯಿಗಳನ್ನು ಅನಾಥಾಶ್ರಮಕ್ಕೆ ಸೇರಿಸಿದ ಮಕ್ಕಳ ವಿಷಯ ಕೇಳಿ ಶಾಪ ಹಾಕುವಿರಿ,ಆದರೆ ನಿಮ್ಮ ಅಮ್ಮ ಅಪ್ಪನಿಗಾಗಿ ವೃದ್ದಾಶ್ರಮ ಹುಡುಕುವಿರಿ……. ವರದಕ್ಷಿಣೆ ಸಾವುಗಳನ್ನುವ ನೋಡಿ ಆಕ್ರೋಶ ವ್ಯಕ್ತಪಡಿಸುವಿರಿ,ನಿಮ್ಮ ಮಕ್ಕಳ ಮದುವೆಗೆ ಚಿನ್ನ, ಕಾರು ಮನೆ ಬೇಕೆಂದು ಆಸೆ ಪಡುವಿರಿ…… ಬೇರೆ ಶ್ರೀಮಂತ ಸಮಾರಂಭಗಳಲ್ಲಿ ವ್ಯರ್ಥವಾಗುವ ಆಹಾರ ನೋಡಿ ಬೇಸರದಿಂದ ಲೊಚಗುಟ್ಟುವಿರಿ,ನಿಮ್ಮ ಮನೆಯ ಕಾರ್ಯಕ್ರಮಗಳಲ್ಲಿ ಅದನ್ನು ಮರೆಯುವಿರಿ….. ಗುರುಹಿರಿಯರ ಅಮೂಲ್ಯ ಹಿತನುಡಿಗಳನ್ನು ಕೇಳಿ ಚಪ್ಪಾಳೆ ಹೊಡೆಯುವಿರಿ,ನಿಜ…
ಮುಂದೆ ಓದಿ..
