ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಬಲ: ಲಕ್ಷ್ಮೀ ಹೆಬ್ಬಾಳ್ಕರ್
ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಬಲ: ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಹಿಳೆಯರ ಜೀವನದಲ್ಲಿ ಕ್ರಾಂತಿ ತರಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಯೋಜನೆಗಳಿಂದ ರಾಜ್ಯದ 70ರಿಂದ 95 ಶೇಕಡಾ ಹಿಂದುಳಿದ ಮಹಿಳೆಯರ ಜೀವನಮಟ್ಟ ಸುಧಾರಣೆ ಕಂಡಿದೆ ಎಂದರು. ಶಕ್ತಿ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆಗಳಿಂದ ಉಳಿತಾಯವಾದ ಹಣವನ್ನು ಹೆಚ್ಚಿನ ಮಹಿಳೆಯರು ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದಾರೆ. ಇದರ ಪರಿಣಾಮವಾಗಿ 88% ಕುಟುಂಬಗಳು ಪೌಷ್ಟಿಕ ಆಹಾರ ಸೇವನೆ ಮಾಡುತ್ತಿವೆ. 83% ಮಹಿಳೆಯರು ತಮ್ಮ ಆರೋಗ್ಯದತ್ತ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಸಚಿವರು ರಾಜ್ಯದ ಏಕೀಕರಣ ಹೋರಾಟಗಾರರ ತ್ಯಾಗವನ್ನು ಸ್ಮರಿಸಿ, ಕನ್ನಡ ನಾಡಿನ ಸಾಂಸ್ಕೃತಿಕ ವೈಭವವನ್ನು ಉಳಿಸಿ ಬೆಳೆಸೋಣ…
ಮುಂದೆ ಓದಿ..
