ಪೂರ್ಣ ಚಂದ್ರ ತೇಜಸ್ವಿ…………
ಪೂರ್ಣಚಂದ್ರತೇಜಸ್ವಿ………… ಕಾಡು ನೆನಪಾದಾಗ ಕಾಡುವ ತೇಜಸ್ವಿ……… ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಈಗಲೂ ಏನೋ ಮೋಡಿ ಮಾಡಿದಂತೆ ಎಲ್ಲರನ್ನೂ ಆಕರ್ಷಿಸುತ್ತಾರೆ. ಇತ್ತೀಚೆಗೆ ಪುನೀತ್ ರಾಜಕುಮಾರ್ ಆ ಸ್ಥಾನಕ್ಕೆ ಬಂದಿದ್ದಾರೆ. ಹಾಗೆಯೇ ನನಗೆ ಕನ್ನಡ ಸಾಹಿತ್ಯದಲ್ಲಿ ತೇಜಸ್ವಿಯವರು ಸಹ ಅದೇರೀತಿ ಓದುಗರಲ್ಲಿ ಮೋಡಿ ಮಾಡಿದ್ದಾರೆ. ಇದು ಅವರ ನಡುವಿನ ಹೋಲಿಕೆಯಲ್ಲ. ಇಬ್ಬರದೂ ಬೇರೆ ಬೇರೆ ಕ್ಷೇತ್ರ. ಜನಾಕರ್ಷಣೆಯ ದೃಷ್ಟಿಯಿಂದ ಮಾತ್ರ ಹೇಳಿದ್ದು. ಕನ್ನಡ ಸಾಹಿತ್ಯದಲ್ಲಿ ಆಗಿನ ಸಂದರ್ಭದಲ್ಲಿ ಸಾಕ್ಷಿ ಪ್ರಜ್ಞೆಯಂತಿದ್ದ, ಸ್ವತಃ ಉತ್ತಮ ಬರಹಗಾರರಾಗಿದ್ದರೂ ಲಂಕೇಶ್ ಅವರು ತೇಜಸ್ವಿ ಬರಹಗಳ ಬಗ್ಗೆ ಬರೆಯುತ್ತಾ, ಅವರ ಬರಹದ ಬಗ್ಗೆ ನನಗೆ ಈಗಲೂ ಅಸೂಯೆ ಕಾಡುತ್ತದೆ. ಹಾಗೆ ಬರೆಯಲು ನನಗೂ ಸಾಧ್ಯವಾಗುತ್ತಿಲ್ಲ ಎಂಬ ಅರ್ಥದಲ್ಲಿ ಅವರನ್ನು ಹೊಗಳುತ್ತಾರೆ. ಸಾಹಿತ್ಯದ ಸಹಜತೆ ಕಾಪಾಡುತ್ತಾ, ಬದುಕಿನ ಸ್ವಾಭಾವಿಕತೆಯನ್ನು ತನ್ನ ನಡವಳಿಕೆಯಾಗಿ ರೂಪಿಸಿಕೊಂಡು ಅದನ್ನು ಅಕ್ಷರಗಳಿಗೆ ಇಳಿಸಿ ಸಾಮಾನ್ಯ ಓದುಗರ ಮನದಲ್ಲಿ ಮನೆ ಮಾಡಿದ ಅಪರೂಪದ…
ಮುಂದೆ ಓದಿ..
