ಸುದ್ದಿ 

ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ವಿಶ್ವ ಆತ್ಮ ಹತ್ಯ ತಡೆ ದಿನ

ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ವಿಶ್ವ ಆತ್ಮ ಹತ್ಯ ತಡೆ ದಿನ ನಗರದ ಗುರುಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಆಡಳಿತ ಸಹಕಾರದೊಂದಿಗೆ ಗ್ರಾಮಭಾರತಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. ಶ್ರೀ ನಟೇಶ್ ಜಿಲ್ಲಾ ಸದಸ್ಯ ಕಾರ್ಯದರ್ಶಿಗಳು ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಪ್ರತಿ ವರ್ಷ ಸುಮಾರು 9 ಲಕ್ಷ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿದ್ದು ಇದೊಂದು ಆತಂಕಕಾರಿ ವಿಷಯ ಇದನ್ನು ತಡೆಗಟ್ಟಲು ಪ್ರತಿಯೊಬ್ಬ ನಾಗರಿಕನು ಸಂವಿಧಾನ ಬದ್ಧ ಕರ್ತವ್ಯಗಳಲ್ಲೂ ಒಂದಾಗಿದ್ದು ಇದಕ್ಕೆ ಪ್ರತಿಯೊಬ್ಬನಾಗರಿಕನು ಕೈಜೋಡಿಸಬೇಕೆಂದು ತಿಳಿಸಿದರು. ತಮ್ಮ ಸುತ್ತು ಮುತ್ತಲ ಪ್ರದೇಶದಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳು, ಮಾದಕ ವಸ್ತುಗಳು ಸಂಗ್ರಹಣೆ ಮತ್ತು ಮಾರಾಟ, ಪರಿಸರದ ಮೇಲೆ ಆಗುತ್ತಿರುವ ಅಕ್ರಮಗಳ ಬಗ್ಗೆ ಜಾಗೃತಿ ವಹಿಸಿ ಆರೋಗ್ಯವಂತ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಆಗಲೇ ಸುಸಂಸ್ಕೃತ ಸಮಾಜ ತಲೆಯೆತ್ತಲು…

ಮುಂದೆ ಓದಿ..
ಸುದ್ದಿ 

ಹಾನಗಲ್ ನ ಜಾನಗುಂಡಿಕೊಪ್ಪದಲ್ಲಿ ಯುವಕ ಕಾಣೆ

ಹಾನಗಲ್ ನ ಜಾನಗುಂಡಿಕೊಪ್ಪದಲ್ಲಿ ಯುವಕ ಕಾಣೆ:ಹಾವೇರಿ ಜಿಲ್ಲೆ ಹಾನಗಲ್ ತಾಲುಕು ಜಾನಗುಂಡಿಕೊಪ್ಪ ಗ್ರಾಮದಲ್ಲಿ 17 ವರ್ಷದ ಯುವಕ ದಿಢೀರ್ ಕಾಣೆಯಾಗಿರುವ ಘಟನೆ ನಡೆದಿದೆದಿನಾಂಕ:-01/09/2025 ರಂದು ಮುಂಜಾನೆ 09-00 ಗಂಟೆ ಸುಮಾರಿಗೆ ಹಾನಗಲ್ಲ ತಾಲೂಕಿನ ಜಾನಗುಂಡಿಕೊಪ್ಪ ಗ್ರಾಮದ ಗುಡ್ಡಪ್ಪ ಮಾಲತೇಶ ಅಕ್ಕಿ ವಯಾ:-17 ವರ್ಷ ಜಾತಿ:-ಹಿಂದೂ ಲಿಂಗಾವಾತ ಈತ ವಿದ್ಯಾರ್ಥಿಯಾಗಿದ್ದುಸಾ||ಜಾನಗುಂಡಿಕೊಪ್ಪ ತಾ||ಹಾನಗಲ್ಲ ಜಿ||ಹಾವೇರಿ ಈತನು ತನ್ನ ಮನೆಯಲ್ಲಿ ಕಾಲೇಜಿಗೆ ಹೋಗಿ ಬರುತ್ತೆನೆ ಅಂತಾ ಹೇಳಿ ಹೋದವನು ಮನೆಗೆ ವಾಪಸ ಬಂದಿರುವುದಿಲ್ಲಾ, ಸದರಿಯವನು ಎಲ್ಲಿಯಾದರೂ ಕಾಣೆಯಾಗಿರಬಹುದು ಅಥವಾ ಸದರಿಯವನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರಬಹದು ಅಂತಾ ಅವರ ಆಪ್ತರಾದ ರವಿ ನಿಂಗಪ್ಪ ಅಕ್ಕಿ ಎನ್ನುವವರು ಹಾನಗಲ್ ನಗರದ ಪೊಲೀಸ ಠಾಣೆಗೆ ದೂರು ನೀಡಿದ್ದಾರೆ.: ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ಸವಣೂರಿನಲ್ಲಿ ಹೆಚ್ಚಿದ ಅಂದರ್ ಬಾಹರ್ ಜೂಜಾಟ

ಸವಣೂರಿನಲ್ಲಿ ಹೆಚ್ಚಿದ ಅಂದರ್ ಬಾಹರ್ ಜೂಜಾಟ: ಹಾವೇರಿ ಜಿಲ್ಲೆ ಸವಣೂರು ತಾಲುಕು ಸಿದ್ದಾಪುರ ಗ್ರಾಮದಲ್ಲಿ ಸಾರ್ವಜನಿಕ ಜೂಜಾಟ ಕಂಡುಬಂದಿದೆ ಸಾರ್ವಜನಿಕರಿಗೆ ಕುಟುಂಬಸ್ಥರಿಗೆ ಬಿತಿ ಹೆಚ್ಚಾಗಿದೆ ದಿನಾಂಕ: 09-09-2025 ರಂದು ಬೆಳಗಿನ ಜಾವ 07-15 ಗಂಟೆಯ ಸುಮಾರಿಗೆ ಸವಣೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಪೊಲೀಸರು ಪೆಟ್ರೋಲಿಂಗ್ ಕರ್ತವ್ಯದಲ್ಲಿದ್ದಾಗ ಒಬ್ಬರು ಮಾಹಿತಿ ನೀಡಿದ್ದು ಅದರಲ್ಲಿ ಸವಣೂರ ತಾಲ್ಲೂಕ ಸಿದ್ದಾಪೂರ ಗ್ರಾಮದ ಬಸ್ಸನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸುಮಾರು 3-4 ಜನರು ಗುಂಪಾಗಿ ಕುಳಿತುಕೊಂಡು ಇಸ್ಪೀಟು ಎಲೆ ಹಚ್ಚಿ ಹಣವನ್ನು ಪಣಕ್ಕೆ ಹಚ್ಚಿ ಅಂದರ ಬಾಹರ ಜೂಜಾಟ ಆಡುತ್ತಿದ್ದಾರೆ ಮತ್ತು ನೀವು ಬಂದು ರೇಡ ಮಾಡಿದರೆ ಸಿಗುತ್ತಾರೆ ಅಂತಾ ಮಾಹಿತಿ ಬಂದಿದ್ದು ಕಾರಣ ಪೊಲೀಸರು ಸ್ಥಳದಲ್ಲಿ ಇಸ್ಪೀಟು ಎಲೆ ಆಡುತ್ತಿದ್ದವರ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ ಸದರಿ ವ್ಯಕ್ತಿಗಳ ಮೇಲೆ ಸರಕಾರಿ ತರಪಿಯಾಗಿ ಸವಣೂರು ಪೊಲೀಸರೇದೂರನ್ನು ಸ್ವೀಕರಿಸಿಕೊಂಡು ಸವಣೂರ…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ತಾಲೂಕು ತಡಸ್ ರಸ್ತೆ ಬಳಿ ಕಾರ್ ಬ್ಯಾರಿಕೇಡ್ ಗೆ ಡಿಕ್ಕಿ ಬಿಕರ ಗಾಯ:

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹುಬ್ಬಳ್ಳಿ ಸಮೀಪದ ತಡಸ್ ರಸ್ತೆ ಬಳಿ ಬಿಕರ ಕಾರು ಅಪಘಾತ ಘಟನೆ ನಡೆದಿದೆ ದಿನಾಂಕ:06/09/2025 ರಂದು ಮುಂಜಾನೆ 04-30 ಗಂಟೆಯಿಂದ 04-45 ಗಂಟೆಯ ನಡುವಿನ ಅವಧಿಯಲ್ಲಿ ಮುತ್ತಳ್ಳಿ ಗ್ರಾಮದ ಲೇ ಬೈ ಹತ್ತಿರ ಶಿಗ್ಗಾಂವ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋದ ಎನ್ ಹೆಚ್-48 ರಸ್ತೆಯಲ್ಲಿ ಕೆಎ-22/ಪಿ-7687 ನೇದ್ದರ ಚಾಲಕನಾದ ವೇದಾಂತ ಅಮೃತರಾವ ಜನ್ಮಣ್ಣವರ ಈತನು ತಾನು ಚಲಾಯಿಸುತ್ತಿದ್ದ ಕಾರನ್ನು ಅತೀವೇಗವಾಗಿ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಕಾರಿನ ವೇಗವನ್ನು ನಿಯಂತ್ರಿಸದೇ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಬ್ಯಾರಿಕೇಡ್ ಗೆ ಡಿಕ್ಕಿ ಪಡಿಸಿ ಇದರಲ್ಲಿಯ ಗಾಯಾಳುವಿಗೆ ತೀವ್ರ ಸ್ವರೂಪದ ಗಾಯನೋವು ಪಡಿಸಿ ಕಾರನ್ನು ಜಖಂಗೊಳಿಸಿದ್ದಲ್ಲದೇ ತಾನು ಸಹ ತೀವ್ರ ಸ್ವರೂಪದ ಗಾಯಕ್ಕೆ ತುತ್ತಾಗಿದ್ದಾನೆ ಇವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ ಈ ಮಾಹಿತಿ ತಿಳಿದ ತಡಸ್ ಪೊಲೀಸರು ತಕ್ಷಣ ಆಕ್ಸಿಡೆಂಟ್ ಆದ ಸ್ಥಳಕ್ಕೆ ಬಂದು…

ಮುಂದೆ ಓದಿ..
ಅಂಕಣ 

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ…… ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ, ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಪಾಡಿಗೆ ನಾವಿದ್ದರೆ ಖಂಡಿತವಾಗಲೂ ಮುಂದಿನ ದಿನಗಳು ನಮ್ಮ ಬುಡಕ್ಕೆ ಈ ಸಮಸ್ಯೆ ಬರಬಹುದು. ಏಕೆಂದರೆ ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಗಲಭೆಗಳು ಸಾಮಾನ್ಯವಾಗುತ್ತಿದೆ. ಅದರ ಅರ್ಥ ಮನಸ್ಸುಗಳು ಧರ್ಮದ ಆಧಾರದ ಮೇಲೆ ಒಡೆದು ಹೋಗುತ್ತಿದೆ. ಇದಕ್ಕೆ ಆ ಕ್ಷಣದ ಆ ಘಟನೆಯಾ ಮೇಲೆ ಚರ್ಚೆ ಮಾಡಿಕೊಂಡು ಒಂದು ನಿರ್ಧಾರಕ್ಕೆ ಬರುವುದು ತೀರ ಬಾಲಿಶವಾದದ್ದು. ವ್ಯವಸ್ಥೆ ಮತ್ತು ಅದು ಸಾಗುತ್ತಿರುವ ದಿಕ್ಕನ್ನು ನಾವು ಸೂಕ್ಷ್ಮವಾಗಿ ಅವಲೋಕಿಸಬೇಕಿದೆ. ನಮ್ಮನ್ನು ಕಾಪಾಡಬೇಕಾಗಿದ್ದ ದೇವರು, ನಮ್ಮನ್ನು ರಕ್ಷಿಸಿ ಕ್ರಮಬದ್ಧ ಜೀವನಶೈಲಿ ರೂಪಿಸಬೇಕಾಗಿದ್ದ ಧರ್ಮಗಳು ಇಂದು ನಮ್ಮನ್ನು ವಿಭಜಿಸಿರುವುದು ಮಾತ್ರವಲ್ಲದೆ ದೇವರು ಧರ್ಮವನ್ನು ಉಳಿಸಬೇಕಾದ ಪರಿಸ್ಥಿತಿ…

ಮುಂದೆ ಓದಿ..
ಅಂಕಣ 

ಪೂರ್ಣ ಚಂದ್ರ ತೇಜಸ್ವಿ…………

ಪೂರ್ಣಚಂದ್ರತೇಜಸ್ವಿ………… ಕಾಡು ನೆನಪಾದಾಗ ಕಾಡುವ ತೇಜಸ್ವಿ……… ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಈಗಲೂ ಏನೋ ಮೋಡಿ ಮಾಡಿದಂತೆ ಎಲ್ಲರನ್ನೂ ಆಕರ್ಷಿಸುತ್ತಾರೆ. ಇತ್ತೀಚೆಗೆ ಪುನೀತ್ ರಾಜಕುಮಾರ್ ಆ ಸ್ಥಾನಕ್ಕೆ ಬಂದಿದ್ದಾರೆ. ಹಾಗೆಯೇ ನನಗೆ ಕನ್ನಡ ಸಾಹಿತ್ಯದಲ್ಲಿ ತೇಜಸ್ವಿಯವರು ಸಹ ಅದೇರೀತಿ ಓದುಗರಲ್ಲಿ ಮೋಡಿ ಮಾಡಿದ್ದಾರೆ. ಇದು ಅವರ ನಡುವಿನ ಹೋಲಿಕೆಯಲ್ಲ. ಇಬ್ಬರದೂ ಬೇರೆ ಬೇರೆ ಕ್ಷೇತ್ರ. ಜನಾಕರ್ಷಣೆಯ ದೃಷ್ಟಿಯಿಂದ ಮಾತ್ರ ಹೇಳಿದ್ದು. ಕನ್ನಡ ಸಾಹಿತ್ಯದಲ್ಲಿ ಆಗಿನ ಸಂದರ್ಭದಲ್ಲಿ ಸಾಕ್ಷಿ ಪ್ರಜ್ಞೆಯಂತಿದ್ದ, ಸ್ವತಃ ಉತ್ತಮ ಬರಹಗಾರರಾಗಿದ್ದರೂ ಲಂಕೇಶ್ ಅವರು ತೇಜಸ್ವಿ ಬರಹಗಳ ಬಗ್ಗೆ ಬರೆಯುತ್ತಾ, ಅವರ ಬರಹದ ಬಗ್ಗೆ ನನಗೆ ಈಗಲೂ ಅಸೂಯೆ ಕಾಡುತ್ತದೆ. ಹಾಗೆ ಬರೆಯಲು ನನಗೂ ಸಾಧ್ಯವಾಗುತ್ತಿಲ್ಲ ಎಂಬ ಅರ್ಥದಲ್ಲಿ ಅವರನ್ನು ಹೊಗಳುತ್ತಾರೆ. ಸಾಹಿತ್ಯದ ಸಹಜತೆ ಕಾಪಾಡುತ್ತಾ, ಬದುಕಿನ ಸ್ವಾಭಾವಿಕತೆಯನ್ನು ತನ್ನ ನಡವಳಿಕೆಯಾಗಿ ರೂಪಿಸಿಕೊಂಡು ಅದನ್ನು ಅಕ್ಷರಗಳಿಗೆ ಇಳಿಸಿ ಸಾಮಾನ್ಯ ಓದುಗರ ಮನದಲ್ಲಿ ಮನೆ ಮಾಡಿದ ಅಪರೂಪದ…

ಮುಂದೆ ಓದಿ..
ಅಂಕಣ 

ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ……….

ಮನೆ ಖರೀದಿ ಬದುಕನ್ನೇ ಮಾರಾಟಮಾಡಿದಂತೆ………. ಸಾಲದ ಇನ್ನೊಂದು ಮುಖ….. ಸ್ವಂತ ಮನೆಯ ಸುಖ ಮತ್ತು ಸಾಲದ ಶೂಲ…… ಅಗತ್ಯವಾದಷ್ಟು ಹಣ ಇದ್ದವರಿಗೆ ಇದು ಅನ್ವಯಿಸುವುದಿಲ್ಲ…. ” 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ ನಿಮ್ಮ ಸ್ವಂತದ್ದಾಗುತ್ತದೆ. ನಿಮ್ಮ ದೃಷ್ಟಿಯಲ್ಲಿ ಆ ಮನೆಯನ್ನು ನೀವು ಖರೀದಿಸಿದ್ದೀರಿ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ವಾಸ್ತವದಲ್ಲಿ ಆ ಮನೆ ನಿಮ್ಮನ್ನು ಖರೀದಿಸಿರುತ್ತದೆ “ ಆಸ್ಟ್ರೇಲಿಯಾದ ಉದ್ಯಮಿಯೊಬ್ಬರ ಅನುಭವದ ನುಡಿಗಳು…… ಭಾರತದ ಮಧ್ಯಮ ವರ್ಗದ ಜನರ ಬದುಕಿಗೆ ಇದು ಅತ್ಯಂತ ಹತ್ತಿರವಾಗಿದೆ. ಕೆಲವು ದಶಕಗಳ ಹಿಂದೆ ಸಾಮಾನ್ಯವಾಗಿ ಬಹುತೇಕ ಸರ್ಕಾರಿ ಉದ್ಯೋಗಿಗಳು ಮತ್ತು ಕೆಲವು ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗು ಕೆಲವು ಯಶಸ್ವಿ ಉದ್ಯಮಿಗಳು ಸುಮಾರು 50/60 ರ‌ ವಯಸ್ಸಿನ ಆಸುಪಾಸಿನಲ್ಲಿ ಅಂದರೆ ನಿವೃತ್ತಿಯ ಸಮೀಪದಲ್ಲಿ ಒಂದು…

ಮುಂದೆ ಓದಿ..
ಅಂಕಣ 

ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ………

ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ…… ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ……… ಹೌದು,ರಕ್ತದ ಬಣ್ಣ ಕೆಂಪು,ಗ್ರಹಣದ ಪರಿಣಾಮ ಘೋರ,ರಕ್ತದ ಅರ್ಥ ಸಾವು ನೋವು.ಇದು ಭಯಂಕರ.ನಮ್ಮ ಕನಸಿನ ಚಂದಮಾಮ ರಕ್ತ ವರ್ಣದಲ್ಲಿ,ಇದು ಸಹಜ ಸ್ವಾಭಾವಿಕ ಅಲ್ಲ.ಇದು ಪ್ರಳಯದ ಮುನ್ಸೂಚನೆ….. ಅಲ್ಲೆಲ್ಲೋ ಭೂಕಂಪ, ಇನ್ನೆಲ್ಲೋ ಸುನಾಮಿ, ಮತ್ತೆಲ್ಲೋ ಅಗ್ನಿಯ ನರ್ತನ, ಮಗದೆಲ್ಲೋ ಮೇಘ ಸ್ಪೋಟ, ಅಪಘಾತ, ಅಪರಾಧ, ಅನಾರೋಗ್ಯ, ಬಾಂಬ್ ಸ್ಪೋಟ ಪ್ರಖ್ಯಾತರ ಸಾವು,ಅಬ್ಬಬ್ಬಾ………… ನಿಮ್ಮ ರಾಶಿ ಯಾವುದು,ಅದಕ್ಕೆ ಅನುಗುಣವಾಗಿ ಗ್ರಹಣದ ಪರಿಣಾಮ ನಿಮ್ಮ ಮೇಲೆ. ಭಯವಾಗುತ್ತಿದೆಯೇ……. ಆದರೂ ಇದಕ್ಕೆ ಪರಿಹಾರವೂ ಇದೆ.ಹೋಮ, ಹವನ, ಮಂತ್ರ ತಂತ್ರಗಳನ್ನು ಮಾಡಿ,ಜಪ ತಪ ವ್ರತಗಳನ್ನು ಮಾಡಿ,ನೇಮ ನಿಷ್ಠೆಗಳಿಂದ ಇದ್ದರೆ ಇದರ ಪರಿಣಾಮದ ತೀವ್ರತೆ ಕಡಿಮೆಯಾಗುತ್ತದೆ………. ಇದು ನಿಜವೇ ? ಸುಳ್ಳೇ ? ನಂಬಿಕೆಯೇ ? ಮೂಲ ನಂಬಿಕೆಯೇ ?…

ಮುಂದೆ ಓದಿ..
ಅಂಕಣ ಸುದ್ದಿ 

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ. ಏಕೆಂದರೆ ಭಾನು ಮುಷ್ತಾಕ್ ಎನ್ನುವ ಮಹಿಳೆ ನಿಸರ್ಗದ ಒಂದು ಜೀವಿ. ನಿಸರ್ಗಕ್ಕೆ ಆಕೆ ಹಿಂದು, ಮುಸ್ಲಿಮ, ಹೆಣ್ಣು, ಗಂಡು ಎಂಬ ಯಾವ ಅರಿವೂ ಇರುವುದಿಲ್ಲ. ಉದ್ಘಾಟನೆಯ ವಿಧಾನ ಮತ್ತು ಅದಕ್ಕೆ ಬಳಸಬಹುದಾದ ಹೂವು, ಹಣ್ಣು, ಅರಿಶಿನ, ಕುಂಕುಮ, ಪೂಜೆ, ಮಂತ್ರ, ಅಜಾನ್, ಖುರಾನ್ ಪಠಣ,…

ಮುಂದೆ ಓದಿ..
ಸುದ್ದಿ 

ಆರ್.ಟಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಮಾಡಿದ ಗೂಡ್ಸ್ ವಾಹನ ಚಾಲಕನ ವಿರುದ್ಧ ಪ್ರಕರಣ

ಬೆಂಗಳೂರು :ನಗರದ ಆರ್.ಟಿ ನಗರದ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟುಮಾಡಿದ ಗೂಡ್ಸ್ ವಾಹನ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಾಹಿತಿಯ ಪ್ರಕಾರ, ಸೆಪ್ಟಂಬರ 4 ರಂದು ಬೆಳಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ಕೋಬ್ರಾ–01 ಗಸ್ತು ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಪೊಲೀಸರು ಸಿ.ಬಿ.ಐ ಮುಖ್ಯರಸ್ತೆಯಲ್ಲಿ ಸಂಚಾರ ನಿರ್ವಹಣೆಯಲ್ಲಿದ್ದರು. ಸಂಜೆ ಸುಮಾರು 6.00 ಗಂಟೆಯ ಸಮಯದಲ್ಲಿ ಪ್ಲಾರೆನ್ಸ್ ಶಾಲೆಯ ಎದುರು KA-05-AM-5926 ಸಂಖ್ಯೆಯ ಗೂಡ್ಸ್ ವಾಹನವನ್ನು ಚಾಲಕನು ಮುಖ್ಯರಸ್ತೆಯಲ್ಲೇ ನಿಲ್ಲಿಸಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡಿದ್ದಾನೆ. ಪೊಲೀಸರು ವಾಹನದ ಹತ್ತಿರ ತೆರಳಿ ಚಾಲಕನ ವಿವರಗಳನ್ನು ವಿಚಾರಿಸಿದಾಗ ಆತನು ಶಿವಕುಮಾರ್ (20), ಉಮೇಶ್ ಕುಮಾರ್ ಪುತ್ರ, ರಂಜಿತಪುರ, ಸೀತಾಮಹಿ ಜಿಲ್ಲೆ, ಬಿಹಾರ್ ರಾಜ್ಯ ನಿವಾಸಿ ಎಂದು ತಿಳಿದುಬಂದಿದೆ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಆ ವಾಹನ ಚಾಲಕನ ವಿರುದ್ಧ ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ಪ್ರಕರಣ…

ಮುಂದೆ ಓದಿ..