ಸುದ್ದಿ 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ಬುರುಡುಗುಂಟೆ ಬಳಿ ಬೈಕ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಇಬ್ಬರು ಪುರುಷರು ಮತ್ತು ಮೂವರು ಮಕ್ಕಳು ಸವಾರಿಯಾಗಿದ್ದ ಬೈಕ್, ಎದುರಿನಿಂದ ಬಂದ ಶಾಲಾ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬಾಲಾಜಿ (34), ವೆಂಕಟೇಶಪ್ಪ (50), ಹರೀಶ್ (12) ಮತ್ತು ಆರ್ಯ (3) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಂದು ಮಗು ತೀವ್ರವಾಗಿ ಗಾಯಗೊಂಡಿದೆ. ಗಾಯಾಳುವಿಗೆ ಬುರುಡುಗುಂಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲಾ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಕ್ಕಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮೃತರು ಚಿಂತಾಮಣಿ ತಾಲ್ಲೂಕಿನ ತಾಡಿಗೊಳ್ಳು ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಮಾಹಿತಿ ದೊರೆತಿದೆ. ಸ್ಥಳೀಯರು…

ಮುಂದೆ ಓದಿ..
ಸುದ್ದಿ 

ಕೆ.ಆರ್.ಪುರಂ ತ್ರಿವೇಣಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮಹಿಳೆ ಸಾವು, ಮೂವರು ಗಂಭೀರ

ಕೆ.ಆರ್.ಪುರಂ ತ್ರಿವೇಣಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮಹಿಳೆ ಸಾವು, ಮೂವರು ಗಂಭೀರ ರಾಜಧಾನಿ ಬೆಂಗಳೂರಿನ ಕೆ.ಆರ್.ಪುರಂ ತ್ರಿವೇಣಿ ನಗರದಲ್ಲಿ ಭಾರೀ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮದಿಂದ ಮನೆ ಸಂಪೂರ್ಣ ಕುಸಿದು ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಅವಶೇಷಗಳಲ್ಲಿ ಸಿಲುಕಿ ಪರದಾಡಿದ್ದಾರೆ. ಬೆಳಗಿನ ವೇಳೆಯಲ್ಲಿ ಈ ದಾರುಣ ಘಟನೆ ನಡೆದಿದ್ದು, ಸಿಲಿಂಡರ್ ಸೋರಿಕೆಯಾಗಿ ಸ್ಫೋಟ ಸಂಭವಿಸಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಸ್ಫೋಟದ ಶಬ್ದದಿಂದ ಸುತ್ತಮುತ್ತಲಿನ ಪ್ರದೇಶದ ಜನ ಬೆಚ್ಚಿಬಿದ್ದಿದ್ದಾರೆ. ಘಟನೆಯ ಮಾಹಿತಿ ದೊರೆತ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳೀಯರು ಸಹ ಸಹಾಯ ಹಸ್ತ ಚಾಚಿದ್ದು, ಕಟ್ಟಡದ ಅವಶೇಷಗಳಲ್ಲಿ ಸಿಲುಕಿದವರನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಸ್ಫೋಟದ…

ಮುಂದೆ ಓದಿ..
ಸುದ್ದಿ 

ಕೊಪ್ಪಳ: ಸಿನಿಮಾರಂಗದ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ದುರ್ಮರಣ

ಕೊಪ್ಪಳ: ಸಿನಿಮಾರಂಗದ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ದುರ್ಮರಣ ಕೊಪ್ಪಳ ಜಿಲ್ಲೆಯ ಕನಕಗಿರಿ ಮೂಲದ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ತಮ್ಮ ಹುಟ್ಟುಹಬ್ಬದಂದೇ ಅಕಾಲಿಕವಾಗಿ ಸಾವನ್ನಪ್ಪಿರುವ ದುಃಖದ ಘಟನೆ ನಡೆದಿದೆ. ಬೆಂಗಳೂರು ನಗರದಲ್ಲಿ ವಾಸವಾಗಿದ್ದ ಆರ್ಯನ್, ಸುಮಾರು 15 ದಿನಗಳ ಹಿಂದೆ ಹಾಸನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೊಳಗಾಗಿ ತೀವ್ರ ಗಾಯಗೊಂಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದರೂ ಜೀವ ಉಳಿಸಲಾರದೆ, ಹುಟ್ಟುಹಬ್ಬದಂದೇ ವಿಧಿವಶರಾದರು. ಆರ್ಯನ್ ಅವರ ನಿಧನದ ನಂತರ ಕುಟುಂಬದವರು ಮತ್ತು ಸ್ನೇಹಿತರು ಭಾವುಕ ಕ್ಷಣದಲ್ಲಿ ಶವದ ಕೈ ಹಿಡಿದು ಕೇಕ್ ಕತ್ತರಿಸಿ ಅವರ ಹುಟ್ಟುಹಬ್ಬವನ್ನು ಆಚರಿಸಿ, ಹೃದಯಮಿಡಿದ ನಮನ ಸಲ್ಲಿಸಿದರು. ಮೃತ ಆರ್ಯನ್ ಅವರ ಕುಟುಂಬಸ್ಥರು ಅವರ ಅಂಗಾಂಗ ದಾನ ಮಾಡಿ, ಮಾನವೀಯತೆ ಮತ್ತು ಸಾರ್ಥಕತೆಯ ಮಾದರಿಯನ್ನು ನಿರ್ಮಿಸಿದ್ದಾರೆ. ಆರ್ಯನ್ ಗವಿಸ್ವಾಮಿ ಅವರ ಅಂತ್ಯಕ್ರಿಯೆ ಇಂದು ಕನಕಗಿರಿಯಲ್ಲಿರುವ ಅವರ ಹುಟ್ಟೂರಿನಲ್ಲಿ ನೆರವೇರಲಿದೆ.

ಮುಂದೆ ಓದಿ..
ಸುದ್ದಿ 

ಆಳಂದ ಮತ ಕಳ್ಳತನ ಪ್ರಕರಣ: ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಬಳಿ ಸುಟ್ಟ ದಾಖಲೆ ಪತ್ತೆ

ಆಳಂದ ಮತ ಕಳ್ಳತನ ಪ್ರಕರಣ: ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಬಳಿ ಸುಟ್ಟ ದಾಖಲೆ ಪತ್ತೆ ಕಲಬುರಗಿ: ಆಳಂದ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ವೇಳೆ ನಡೆದಿದ್ದ ಮತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆ ತೀವ್ರಗೊಳಿಸಿದೆ. ಶನಿವಾರ (ಅ.18) ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಅವರ ನಿವಾಸದ ಬಳಿ ಸುಟ್ಟ ಮತದಾರರ ದಾಖಲೆಗಳ ರಾಶಿ ಪತ್ತೆಯಾದ ಘಟನೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ದಾಖಲೆಗಳ ಮೂಲಕ ಸುಮಾರು 6,000ಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಸಂಚು ರೂಪಿಸಲಾಗಿತ್ತು ಎಂಬುದು ಬಹಿರಂಗವಾಗಿದೆ. ಗುತ್ತೇದಾರ್ ಸ್ಪಷ್ಟನೆ…. ಈ ಕುರಿತು ಸ್ಪಷ್ಟನೆ ನೀಡಿದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, “ಸ್ವಚ್ಛತಾ ಅಭಿಯಾನದ ಪ್ರಯುಕ್ತ ಮನೆಯ ಸ್ವಚ್ಛತಾ ಸಿಬ್ಬಂದಿಯೊಬ್ಬರು ಹಳೆಯ ದಾಖಲೆಗಳನ್ನು ಹೊರಗೆ ಹಾಕಿ ಸುಟ್ಟುಹಾಕಿದ್ದಾರೆ. ಇದರ…

ಮುಂದೆ ಓದಿ..
ಸುದ್ದಿ 

ಬೆಂಗಳೂರು ನಡಿಗೆ: ನಾಗರಿಕರೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದ

ಬೆಂಗಳೂರು ನಡಿಗೆ: ನಾಗರಿಕರೊಂದಿಗೆ ಡಿ.ಕೆ. ಶಿವಕುಮಾರ್ ಸಂವಾದ ಬೆಂಗಳೂರು: ಪಶ್ಚಿಮ ನಗರ ಪಾಲಿಕೆಯ ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರದ ಗಾಂಧಿ ಉದ್ಯಾನವನದಲ್ಲಿ ಶನಿವಾರ ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ ನಾಗರಿಕರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಭರತ್ ನಗರದ ನಿವಾಸಿಗಳು ತಮ್ಮ ಸಮಸ್ಯೆಗಳು, ಮೂಲಸೌಕರ್ಯ ಸಮಸ್ಯೆಗಳು, ರಸ್ತೆ, ಒಳಚರಂಡಿ, ನೀರು ಹಾಗೂ ಕಸ ನಿರ್ವಹಣೆಯ ಕುರಿತ ಅಹವಾಲುಗಳನ್ನು ಸಚಿವರಿಗೆ ಮಂಡಿಸಿದರು. ನಾಗರಿಕರ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿದ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್, ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಉಪ ಮುಖ್ಯಮಂತ್ರಿ ಕಾರ್ಯದರ್ಶಿ, ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಪಶ್ಚಿಮ ಪಾಲಿಕೆ ಆಯುಕ್ತ ಡಾ. ರಾಜೇಂದ್ರ…

ಮುಂದೆ ಓದಿ..
ಸುದ್ದಿ 

ಮಗನ ಮೇಲೆ ಗುಂಡು ಹಾರಿಸಿದ ತಂದೆ – ಒಂದು ಕಣ್ಣು ಕಳೆದುಕೊಂಡ ಮಗ!

ಮಗನ ಮೇಲೆ ಗುಂಡು ಹಾರಿಸಿದ ತಂದೆ – ಒಂದು ಕಣ್ಣು ಕಳೆದುಕೊಂಡ ಮಗ! ದೊಡ್ಡಬಳ್ಳಾಪುರ : ಕುಡಿದ ಮತ್ತಿನಲ್ಲಿ ತಂದೆ-ಮಗನ ಮಧ್ಯೆ ನಡೆದ ಗಲಾಟೆ ಭೀಕರ ರೂಪ ಪಡೆದಿದ್ದು, ತಂದೆಯೇ ಮಗನ ಮೇಲೆ ಗುಂಡು ಹಾರಿಸಿದ ಘಟನೆ ಬೆಳಕಿಗೆ ಬಂದಿದೆ. ಮರಳೇನಹಳ್ಳಿ ಗ್ರಾಮದಲ್ಲಿ ಇಂದು ತಡರಾತ್ರಿ 2 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಡಬ್ಬಲ್ ಬ್ಯಾರೆಲ್ ಬಂದೂಕಿನಿಂದ ತನ್ನ ಮಗನ ತಲೆಗೆ ಗುಂಡು ಹಾರಿಸಿರುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಡೇಟಿನಿಂದ ಮಗ ಹರೀಶ್ (28) ಗಂಭೀರವಾಗಿ ಗಾಯಗೊಂಡು, ಒಂದು ಕಣ್ಣು ಕಳೆದುಕೊಂಡಿದ್ದಾರೆ. ಗಾಯಾಳು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆ ಸುರೇಶ್ (49) ಘಟನೆಯ ಆರೋಪಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಕುಡಿತದ ನಶೆಯಲ್ಲಿ ತಂದೆ ಮತ್ತು ಮಗನ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ನಡುವೆಯೇ ಮತ್ತೊಮ್ಮೆ ಉಂಟಾದ ಗಲಾಟೆಯಲ್ಲಿ ಕೋಪಗೊಂಡ…

ಮುಂದೆ ಓದಿ..
ಸುದ್ದಿ 

ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಜಾಲ ಬಯಲು : ಖಾಸಗಿ ಆಸ್ಪತ್ರೆ ಮಾಲಕಿ ಕಿಂಗ್‌ಪಿನ್! ಐವರು ಬಂಧನ

ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಜಾಲ ಬಯಲು : ಖಾಸಗಿ ಆಸ್ಪತ್ರೆ ಮಾಲಕಿ ಕಿಂಗ್‌ಪಿನ್! ಐವರು ಬಂಧನ ಮೈಸೂರಿನ ಬನ್ನೂರು ಹೈವೇ ಬಳಿಯ ಫಾರಂ ಹೌಸ್‌ನಲ್ಲಿ ನಡೆಯುತ್ತಿದ್ದ ಅಮಾನವೀಯ ಭ್ರೂಣ ಲಿಂಗ ಪತ್ತೆ ದಂಧೆ ಬಯಲಾಗಿದ್ದು, ಜಿಲ್ಲೆಯ ಆರೋಗ್ಯ ಇಲಾಖೆಯ ತಂಡವು ಯಶಸ್ವಿ ದಾಳಿ ನಡೆಸಿ ಐವರನ್ನು ಬಂಧಿಸಿದೆ. ಈ ಘಟನೆಯ ಮುಖ್ಯ ಆರೋಪಿ ಖಾಸಗಿ ಆಸ್ಪತ್ರೆಯ ಮಾಲಕಿಯೇ ಎಂಬುದು ತನಿಖೆಯಿಂದ ಸ್ಪಷ್ಟವಾಗಿದೆ. ದಂಧೆಯ ಕಿಂಗ್‌ಪಿನ್: ಖಾಸಗಿ ಆಸ್ಪತ್ರೆ ಮಾಲಕಿ ಶ್ಯಾಮಲಾ ಬನ್ನೂರಿನ ಎಸ್‌.ಕೆ. ಆಸ್ಪತ್ರೆ ಮಾಲಕಿ ಶ್ಯಾಮಲಾ ಈ ಕೃತ್ಯದ ಮಾಸ್ಟರ್‌ಮೈಂಡ್ ಆಗಿದ್ದು, ಅವರ ಪತಿ ಗೋವಿಂದರಾಜು ಸಹ ಸಹಾಯಕರಾಗಿದ್ದಾನೆಂದು ತನಿಖೆಯಿಂದ ತಿಳಿದುಬಂದಿದೆ. ಮಧ್ಯವರ್ತಿ ಪುಟ್ಟರಾಜು ಮೂಲಕ ಗರ್ಭಿಣಿಯರನ್ನು ಸಂಪರ್ಕಿಸಿ, ಫಾರಂ ಹೌಸ್‌ನಲ್ಲಿ ಅಕ್ರಮ ಸ್ಕ್ಯಾನಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಒಂದು ಭ್ರೂಣ ಲಿಂಗ ಪತ್ತೆಗೆ ₹25,000 ರಿಂದ ₹35,000 ವರೆಗೆ ವಸೂಲು ಮಾಡಲಾಗುತ್ತಿತ್ತೆಂದು ತಿಳಿದುಬಂದಿದೆ. ಫಾರಂ…

ಮುಂದೆ ಓದಿ..
ಸುದ್ದಿ 

ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ: ಶರಣ ಪ್ರಕಾಶ್ ಪಾಟೀಲ್

ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ: ಶರಣ ಪ್ರಕಾಶ್ ಪಾಟೀಲ್ ನಾಗಮಂಗಲ :ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ೨೦೨೫ನೇ ಸಾಲಿನ ವೈದ್ಯಕೀಯ ಮತ್ತು ಅನ್ವಯಿಕ ಆರೋಗ್ಯ ವಿಜ್ಞಾನಗಳ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಭವ್ಯವಾಗಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾತನಾಡಿ ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳ ಪರಿಶ್ರಮದ ಫಲವಾಗಿ ಸ್ಥಾಪನೆಯಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಈ ಮಠವನ್ನು ಪೂಜ್ಯ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಂತಹ ಕ್ಷೇತ್ರದಲ್ಲಿ ಓದುತ್ತಿರುವುದು ನಿಮಗೆ ಶ್ರೇಷ್ಠ ಅವಕಾಶ ಹಾಗೂ ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠವು ಮಾಡುತ್ತಿರುವುದು ಹೆಮ್ಮೆ ಪಡುವ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು ಇದೇ ಸಂದರ್ಭದಲ್ಲಿ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯವು ಹೊರತಂದಿರುವ ಅಂಕಣ ಬರಹದ ಹೊತ್ತಿಗೆಗಳನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ…

ಮುಂದೆ ಓದಿ..
ಸುದ್ದಿ 

ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆಯೋ, ಅಪಘಾತವೋ ಎಂಬ ಅನುಮಾನ

ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆಯೋ, ಅಪಘಾತವೋ ಎಂಬ ಅನುಮಾನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಯುವ ಶಿಕ್ಷಕಿಯೊಬ್ಬರ ಶವ ಮನೆಯ ಪಕ್ಕದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಅನುಮಾನಕ್ಕೆ ಕಾರಣವಾಗಿದೆ. ಬೂಡುಮುಗೇರು ನಿವಾಸಿ ತೇಜಸ್ವಿನಿ (23) ಮೃತಪಟ್ಟ ಶಿಕ್ಷಕಿ. ತೇಜಸ್ವಿನಿ ಸ್ಥಳೀಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆಂದು ಕುಟುಂಬದವರು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಮನೆಯವರು ಕಾಣದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ, ಮನೆಯ ಪಕ್ಕದಲ್ಲಿರುವ ಬಾವಿಯಲ್ಲಿ ಶವ ತೇಲುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಲು ಜಾರಿ ಬಾವಿಗೆ ಬಿದ್ದರೋ ಅಥವಾ ಆತ್ಮಹತ್ಯೆ ಮಾಡಿಕೊಂಡರೋ ಎಂಬ…

ಮುಂದೆ ಓದಿ..
ಸುದ್ದಿ 

ಮೈಸೂರು : ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣ – ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆ ಬಂಧನ!

ಮೈಸೂರು : ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣ – ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆ ಬಂಧನ! ಸಾಂಸ್ಕೃತಿಕ ನಗರಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದ ಅಚ್ಚರಿಯ ಘಟನೆಯಲ್ಲಿ, ಮಗುವನ್ನು ಅಪಹರಿಸಿದ 50 ವರ್ಷದ ವೃದ್ಧೆಯನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ ಜೊತೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬಳು ಎತ್ತಿಕೊಂಡು ಹೋಗಿದ್ದು, ತಾಯಿ ಎಚ್ಚರಗೊಂಡಾಗ ಮಗು ಕಾಣೆಯಾದ್ದು ಗಮನಕ್ಕೆ ಬಂದಿದೆ. ತಕ್ಷಣವೇ ಆತಂಕಗೊಂಡ ಕುಟುಂಬಸ್ಥರು ರೈಲ್ವೆ ಪೊಲೀಸರಿಗೆ ದೂರು ನೀಡಿದ ನಂತರ, RPF ಸಿಬ್ಬಂದಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ತುರ್ತು ಕ್ರಮ ಕೈಗೊಂಡರು. ವೀಡಿಯೊ ದೃಶ್ಯಗಳಲ್ಲಿ ವೃದ್ಧೆ ಮಗು ಕೈಯಲ್ಲಿ ಹಿಡಿದು ನಿಲ್ದಾಣದ ಹೊರಗೆ ತೆರಳುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಬಂಧಿತೆಯು ಹಾಸನ ಮೂಲದ ನಂದಿನಿ (50) ಎಂದು ಗುರುತಿಸಲಾಗಿದ್ದು, ಮಗುವನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ಹಸ್ತಾಂತರಿಸಲಾಗಿದೆ. ಈ…

ಮುಂದೆ ಓದಿ..