ಸಾಗರದಲ್ಲಿ ನಕಲಿ ಯೂಟ್ಯೂಬರ್ಸ್ ಅಟ್ಟಹಾಸ – ಪತ್ರಕರ್ತರ ಸಂಘದಿಂದ ಕಠಿಣ ಕ್ರಮಕ್ಕೆ ಒತ್ತಾಯ
ಸಾಗರದಲ್ಲಿ ನಕಲಿ ಯೂಟ್ಯೂಬರ್ಸ್ ಅಟ್ಟಹಾಸ – ಪತ್ರಕರ್ತರ ಸಂಘದಿಂದ ಕಠಿಣ ಕ್ರಮಕ್ಕೆ ಒತ್ತಾಯ ಸಾಗರ: ನಕಲಿ ಯೂಟ್ಯೂಬರ್‌ಗಳ ಬ್ಲ್ಯಾಕ್‌ಮೇಲ್ ಅಟ್ಟಹಾಸದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ವತಿಯಿಂದ ಗುರುವಾರ ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚಿನ ದಿನಗಳಲ್ಲಿ “ಯೂಟ್ಯೂಬ್ ಪತ್ರಕರ್ತ” ಎಂದು ಹೇಳಿಕೊಂಡು ಅಕ್ರಮ ಚಟುವಟಿಕೆ ನಡೆಸುವವರ ಸಂಖ್ಯೆ ತೀವ್ರವಾಗಿ ಏರಿದೆ. ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಕೆಲವರು ಬ್ಲ್ಯಾಕ್‌ಮೇಲ್, ಹಣದ ವಸೂಲಿ ಮತ್ತು ಬೆದರಿಕೆ ಕೃತ್ಯಗಳಲ್ಲಿ ತೊಡಗಿರುವುದು ಸಂಘದ ಗಮನಕ್ಕೆ ಬಂದಿದೆ. ಇವರಿಗೆ ನಿಜವಾದ ಪತ್ರಕರ್ತತ್ವ ಅಥವಾ ಪತ್ರಕರ್ತರ ಸಂಘದೊಂದಿಗೆ ಯಾವುದೇ ನಂಟಿಲ್ಲ ಎಂದು ಮನವಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಲೇಔಟ್ ಮಾಲೀಕರು, ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳು, ಶಿಕ್ಷಕರು ಇಂತಹ ನಕಲಿ ಪತ್ರಕರ್ತರ ಬಲಿಯಾಗುತ್ತಿದ್ದಾರೆ. “ನಿಮ್ಮ ವಿರುದ್ಧ ಯೂಟ್ಯೂಬ್‌ನಲ್ಲಿ ಸುದ್ದಿ ಹಾಕುತ್ತೇವೆ” ಎಂದು…
ಮುಂದೆ ಓದಿ..
