ಜಾತಿ ಸಮೀಕ್ಷೆಯ ಹೆಸರಿನಲ್ಲಿ ಶಿಕ್ಷಕರಿಗೆ ನರಕಯಾತನೆ! ಆನೇಕಲ್ನಲ್ಲಿ ಶಿಕ್ಷಕಿಗೆ ಹೃದಯಾಘಾತ
ಜಾತಿ ಸಮೀಕ್ಷೆಯ ಹೆಸರಿನಲ್ಲಿ ಶಿಕ್ಷಕರಿಗೆ ನರಕಯಾತನೆ! ಆನೇಕಲ್ನಲ್ಲಿ ಶಿಕ್ಷಕಿಗೆ ಹೃದಯಾಘಾತ ಸರ್ಕಾರದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಶಿಕ್ಷಕರನ್ನು ದಿನರಾತ್ರಿ ಓಡಿಸುತ್ತಿರುವ ಅಮಾನವೀಯ ಪರಿಸ್ಥಿತಿ ಬೆಳಕಿಗೆ ಬಂದಿದೆ. ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಯಶೋಧ ಅವರಿಗೆ ಸಮೀಕ್ಷೆಯ ವೇಳೆ ಹೃದಯಾಘಾತ ಸಂಭವಿಸಿದೆ. ಊಟ–ನೀರು ಇಲ್ಲದೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಠಾತ್ ಕುಸಿದು ಬಿದ್ದ ಶಿಕ್ಷಕಿಯನ್ನು ತುರ್ತುವಾಗಿ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದಾರೆ. ರಾಜ್ಯದೆಲ್ಲೆಡೆ ವಿರೋಧ ವ್ಯಕ್ತವಾಗುತ್ತಿದ್ದರೂ ಸಮೀಕ್ಷೆ ಕಾರ್ಯವನ್ನು ಸರ್ಕಾರ ಬಲವಂತವಾಗಿ ಮುಂದುವರೆಸುತ್ತಿದೆ. ಶಾಲಾ ಶಿಕ್ಷಕರಿಗೆ ಅವರ ಮೂಲ ಬೋಧನಾ ಕಾರ್ಯವನ್ನು ಬಿಟ್ಟು ಮನೆ ಮನೆ ಓಡಾಡುವ ಸಮೀಕ್ಷೆ ಕಾರ್ಯವನ್ನು ನೀಡಿದ್ದು, ಇದರಿಂದ ಅವರು ತೀವ್ರ ದೈಹಿಕ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಬಿಸಿಲು, ಮಳೆ, ಧೂಳು, ದಾಹ – ಯಾವುದಕ್ಕೂ ವಿಶ್ರಾಂತಿ…
ಮುಂದೆ ಓದಿ..
