ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ……….
ಮನೆ ಖರೀದಿ ಬದುಕನ್ನೇ ಮಾರಾಟಮಾಡಿದಂತೆ………. ಸಾಲದ ಇನ್ನೊಂದು ಮುಖ….. ಸ್ವಂತ ಮನೆಯ ಸುಖ ಮತ್ತು ಸಾಲದ ಶೂಲ…… ಅಗತ್ಯವಾದಷ್ಟು ಹಣ ಇದ್ದವರಿಗೆ ಇದು ಅನ್ವಯಿಸುವುದಿಲ್ಲ…. ” 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ ನಿಮ್ಮ ಸ್ವಂತದ್ದಾಗುತ್ತದೆ. ನಿಮ್ಮ ದೃಷ್ಟಿಯಲ್ಲಿ ಆ ಮನೆಯನ್ನು ನೀವು ಖರೀದಿಸಿದ್ದೀರಿ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ವಾಸ್ತವದಲ್ಲಿ ಆ ಮನೆ ನಿಮ್ಮನ್ನು ಖರೀದಿಸಿರುತ್ತದೆ “ ಆಸ್ಟ್ರೇಲಿಯಾದ ಉದ್ಯಮಿಯೊಬ್ಬರ ಅನುಭವದ ನುಡಿಗಳು…… ಭಾರತದ ಮಧ್ಯಮ ವರ್ಗದ ಜನರ ಬದುಕಿಗೆ ಇದು ಅತ್ಯಂತ ಹತ್ತಿರವಾಗಿದೆ. ಕೆಲವು ದಶಕಗಳ ಹಿಂದೆ ಸಾಮಾನ್ಯವಾಗಿ ಬಹುತೇಕ ಸರ್ಕಾರಿ ಉದ್ಯೋಗಿಗಳು ಮತ್ತು ಕೆಲವು ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗು ಕೆಲವು ಯಶಸ್ವಿ ಉದ್ಯಮಿಗಳು ಸುಮಾರು 50/60 ರ ವಯಸ್ಸಿನ ಆಸುಪಾಸಿನಲ್ಲಿ ಅಂದರೆ ನಿವೃತ್ತಿಯ ಸಮೀಪದಲ್ಲಿ ಒಂದು…
ಮುಂದೆ ಓದಿ..
