ಕುರ್ಚಿಗಾಗಿ ಕಿತ್ತಾಟ…….
ಕುರ್ಚಿಗಾಗಿ ಕಿತ್ತಾಟ……. ಸಂಪುಟ ವಿಸ್ತರಣೆ ಮತ್ತು ಖಾತೆಗಳು ಎಂಬ ರೋಗ….. ಸಮಾಜದ ನಡೆ ದುರಂತದ ಕಡೆ……. ಸುಮಾರು ವರ್ಷಗಳಿಂದ ಕರ್ನಾಟಕದಲ್ಲಿ ವಿವಿಧ ಪಕ್ಷಗಳು ಅಧಿಕಾರಕ್ಕೆ ಬಂದಾಗ ಅವರು ಎದುರಿಸುವ ಬಹುದೊಡ್ಡ ಸಮಸ್ಯೆ ಜನರಿಗೆ ಹೇಗೆ ಅತ್ಯುತ್ತಮ ಸೇವೆ ಒದಗಿಸಬೇಕು ಎಂಬುದಲ್ಲ, ಬದಲಾಗಿ ಸಚಿವ ಸಂಪುಟದ ವಿಸ್ತರಣೆ ಮತ್ತು ಖಾತೆಗಳ ಹಂಚಿಕೆ…….. ಮುಖ್ಯಮಂತ್ರಿಯಾದವರು ತಮ್ಮ ಆಡಳಿತದ ಬಹುತೇಕ ಸಮಯವನ್ನು ಇದರ ಬಗ್ಗೆ ಯೋಚಿಸುವುದರಲ್ಲಿ ಮತ್ತು ಶಾಸಕರನ್ನು ಸಮಾಧಾನ ಮಾಡಿ ಹಿಡಿದಿಟ್ಟುಕೊಳ್ಳುವಲ್ಲಿಯೇ ಕಳೆದು ಬಿಡುತ್ತಾರೆ. ಜನರ ಬಗ್ಗೆ ಚಿಂತಿಸಲು ಅವರ ಬಳಿ ತುಂಬಾ ಕಡಿಮೆ ಸಮಯವಿರುತ್ತದೆ. ನಿಮಗೆ ತಿಳಿದಿರಬಹುದು,ಸರ್ಕಾರದ ಬಳಿ 34 ಮಂತ್ರಿಗಳ ಸ್ಥಾನ ಮತ್ತು ಮುಖ್ಯವಾಗಿ ಸುಮಾರು 75 ಇಲಾಖೆಗಳನ್ನು ಆಡಳಿತದ ಅನುಕೂಲಕ್ಕಾಗಿ ಮಾಡಿಕೊಳ್ಳಲಾಗಿದೆ. ಇದರಲ್ಲಿ ಯಾವುದೇ ಪಕ್ಷದ ಶಾಸಕರು ಅವರ ದೃಷ್ಟಿಯಲ್ಲಿ ಅತಿ ಮಹತ್ವದ ಇಲಾಖೆ ಎಂದು ಪರಿಗಣಿಸುವುದು ಯಾವುದು ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗಬಹುದು. ಗೃಹ…
ಮುಂದೆ ಓದಿ..
