ಚಿಕ್ಕೋಡಿ : ಮಧ್ಯರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಕಳ್ಳರ ದಾಳಿ ಯತ್ನ
ಚಿಕ್ಕೋಡಿ : ಮಧ್ಯರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಕಳ್ಳರ ದಾಳಿ ಯತ್ನ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿಪ್ಪಾಣಿ ನಗರದಲ್ಲಿ ಮಧ್ಯರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದರೋಡೆಕೋರರು ದಾಳಿ ಮಾಡಲು ಮುಂದಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಕೈಯಲ್ಲಿ ಮಚ್ಚು ಹಾಗೂ ಲಾಂಗು ಹಿಡಿದಿದ್ದ ಅಸಾಮಾಜಿಕ ಅಂಶಗಳು ಪೊಲೀಸರತ್ತ ಧಾವಿಸಿರುವುದು ಸಿಸಿಟಿವಿ ದೃಶ್ಯದಲ್ಲಿ ಸ್ಪಷ್ಟವಾಗಿದೆ. ಮನೆಗಳಿಗೆ ದಾಳಿ ನಡೆಸುವ ಉದ್ದೇಶದಿಂದ ನಾಲ್ವರು ಶಂಕಿತರು ಸುತ್ತಮುತ್ತ ತಿರುಗಾಡುತ್ತಿರುವಾಗ, ಪೊಲೀಸ್ ಪೇಟ್ರೋಲ್ ವಾಹನ ಹಾದು ಹೋಗುವುದನ್ನು ಕಂಡು ಗಾಬರಿಗೊಂಡ ಅವರು ಓಡತೊಡಗಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ಕಳ್ಳ, ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪರಾರಿಯಾದ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಿ ಪೊಲೀಸರು…
ಮುಂದೆ ಓದಿ..
