ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಚಾಕು ಇರಿತ – ಐವರು ಗಾಯಾಳುಗಳು!
ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಚಾಕು ಇರಿತ – ಐವರು ಗಾಯಾಳುಗಳು! ಬೆಳಗಾವಿ, ನವೆಂಬರ್ 1: ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ನಡೆದ ಮೆರವಣಿಗೆಯ ವೇಳೆ ದುರ್ಘಟನೆ ಸಂಭವಿಸಿದೆ. ನಗರದ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ಐವರು ಯುವಕರಿಗೆ ಚಾಕು ಇರಿದು ಗಾಯಗಳಾಗಿವೆ. ದುಷ್ಕರ್ಮಿಗಳು ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಮೆರವಣಿಗೆಯ ವೇಳೆ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಭುವನೇಶ್ವರಿ ಮೂರ್ತಿಯನ್ನು ಹೊತ್ತುಕೊಂಡು ಯುವಕರು ನೃತ್ಯದಲ್ಲಿ ತಲ್ಲೀನರಾಗಿದ್ದರು. ಈ ವೇಳೆಯಲ್ಲಿ ಅಚಾನಕ್ ಆಗಿ ಕೆಲವರು ಗುಂಪಿನೊಳಗೆ ನುಗ್ಗಿ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎಂದು ಕಣ್ಣಾರೆ ಸಾಕ್ಷಿಗಳು ತಿಳಿಸಿದ್ದಾರೆ. ಚಾಕು ಇರಿತದಿಂದ ಯುವಕರು ನೆಲಕ್ಕುಸಿದು ರಕ್ತಸ್ರಾವದಿಂದ ಅಸ್ತವ್ಯಸ್ತರಾದರು. ಗಂಭೀರವಾಗಿ ಗಾಯಗೊಂಡ ಐವರು ಯುವಕರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ ಹಾಗೂ ನರ್ಜೀ ಪಠಾಣ್ ಗಾಯಗೊಂಡವರಾಗಿ ಗುರುತಿಸಲ್ಪಟ್ಟಿದ್ದಾರೆ.…
ಮುಂದೆ ಓದಿ..
