ಸತ್ಯದ ಸಾಕ್ಷಾತ್ಕಾರ…….. ಆತ್ಮಾವಲೋಕನದ ದಾರಿಯಲ್ಲಿ……. ಸತ್ಯದ ಹುಡುಕಾಟದಲ್ಲಿಯು ಮನಸ್ಸು ಮಲಿನವಾಗುತ್ತಾ ಸಾಗುತ್ತದೆ….. ನಾವೇ ಬುದ್ದಿವಂತರೆಂಬ ಭ್ರಮೆ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗೆ ಮಾತನಾಡಿದರೆ ನಮಗೆ ಮೆಚ್ಚುಗೆ ಸಿಗುತ್ತದೆ ಎಂದು ಅರ್ಥವಾಗತೊಡಗುತ್ತದೆ. ಹಾಗೆ ಮಾತನಾಡಿದರೆ ನಮಗೆ ವಿರೋಧ ವ್ಯಕ್ತವಾಗುತ್ತದೆ ಎಂದೂ ಅರಿವಾಗತೊಡಗುತ್ತದೆ. ಬೇರೆಯವರನ್ನು ಹೇಗೆ ಮೆಚ್ಚಿಸಬೇಕು,ಬೇರೆಯವರನ್ನು ಹೇಗೆ ಉದ್ರೇಕಿಸಬೇಕು,ಬೇರೆಯವರನ್ನು ಹೇಗೆ ಘಾಸಿಗೊಳಿಸಬೇಕು,ಬೇರೆಯವರನ್ನು ಹೇಗೆ ಅವಮಾನಿಸಬೇಕು,ಬೇರೆಯವರನ್ನು ಹೇಗೆ ನಿರ್ಲಕ್ಷಿಸಬೇಕು,ಬೇರೆಯವರನ್ನು ಹೇಗೆ ಕೆಟ್ಟವರನ್ನಾಗಿ ಮಾಡಬೇಕು,ಬೇರೆಯವರನ್ನು ಹೇಗೆ ಟಾರ್ಗೆಟ್ ಮಾಡಬೇಕು,ಎಂದು ಸ್ಪಷ್ಟವಾಗುತ್ತಾ ಹೋಗುತ್ತದೆ. ಹಾಗೆಯೇ,ನಾವು ಹೇಗೆ ಬುದ್ದಿವಂತರೆನಿಸಿಕೊಳ್ಳಬೇಕು,ನಾವು ಹೇಗೆ ಒಳ್ಳೆಯವರೆನಿಸಿಕೊಳ್ಳಬೇಕು,ನಾವು ಹೇಗೆ ಜನಪ್ರಿಯರಾಗಬೇಕು,ನಾವು ಹೇಗೆ ಹಣವಂತರಾಗಬೇಕು,ನಾವು ಹೇಗೆ ಅಧಿಕಾರಕ್ಕೇರಬೇಕು,ನಾವು ಹೇಗೆ ಪ್ರಚಾರ ಪಡೆಯಬೇಕು,ನಾವು ಹೇಗೆ ದೊಡ್ಡವರೆನಿಸಬೇಕು,ನಾವು ಹೇಗೆ ಪ್ರಶಸ್ತಿ ಪಡೆಯಬೇಕು,ನಾವು ಹೇಗೆ ಸನ್ಮಾನಿಸಿಕೊಳ್ಳಬೇಕು ,ಎಂಬುದೂ ಗೊತ್ತಾಗತೊಡಗುತ್ತದೆ. ಈ ಮಧ್ಯೆ ಸತ್ಯದ ಹುಡುಕಾಟ ದಾರಿ ತಪ್ಪುತ್ತದೆ…….. ಆದರೆ ಇವೆಲ್ಲವನ್ನೂ ಮೀರಿ, ಸ್ವಾರ್ಥವನ್ನು ಗೆದ್ದು,ವಿಶಾಲ ಮನೋಭಾವದಿಂದ ಮನಸ್ಸನ್ನು ನಿಯಂತ್ರಣಕ್ಕೆ ಪಡೆದುಕೊಂಡು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದಾಗ ಮಾತ್ರ ನಾವು ಸತ್ಯದ…
ಮುಂದೆ ಓದಿ..