ಮೈಸೂರು : ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣ – ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆ ಬಂಧನ!
ಮೈಸೂರು : ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣ – ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆ ಬಂಧನ! ಸಾಂಸ್ಕೃತಿಕ ನಗರಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದ ಅಚ್ಚರಿಯ ಘಟನೆಯಲ್ಲಿ, ಮಗುವನ್ನು ಅಪಹರಿಸಿದ 50 ವರ್ಷದ ವೃದ್ಧೆಯನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ ಜೊತೆ ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬಳು ಎತ್ತಿಕೊಂಡು ಹೋಗಿದ್ದು, ತಾಯಿ ಎಚ್ಚರಗೊಂಡಾಗ ಮಗು ಕಾಣೆಯಾದ್ದು ಗಮನಕ್ಕೆ ಬಂದಿದೆ. ತಕ್ಷಣವೇ ಆತಂಕಗೊಂಡ ಕುಟುಂಬಸ್ಥರು ರೈಲ್ವೆ ಪೊಲೀಸರಿಗೆ ದೂರು ನೀಡಿದ ನಂತರ, RPF ಸಿಬ್ಬಂದಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ತುರ್ತು ಕ್ರಮ ಕೈಗೊಂಡರು. ವೀಡಿಯೊ ದೃಶ್ಯಗಳಲ್ಲಿ ವೃದ್ಧೆ ಮಗು ಕೈಯಲ್ಲಿ ಹಿಡಿದು ನಿಲ್ದಾಣದ ಹೊರಗೆ ತೆರಳುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಬಂಧಿತೆಯು ಹಾಸನ ಮೂಲದ ನಂದಿನಿ (50) ಎಂದು ಗುರುತಿಸಲಾಗಿದ್ದು, ಮಗುವನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ಹಸ್ತಾಂತರಿಸಲಾಗಿದೆ. ಈ…
ಮುಂದೆ ಓದಿ..
