ರಾಜ್ಯದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳಿಗೆ ನಿಷೇಧ — ಪರಿಸರ ಸ್ನೇಹಿ ನೀರಿನ ವ್ಯವಸ್ಥೆಗೆ ಮುಖ್ಯಮಂತ್ರಿ ಆದೇಶ
ರಾಜ್ಯದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳಿಗೆ ನಿಷೇಧ — ಪರಿಸರ ಸ್ನೇಹಿ ನೀರಿನ ವ್ಯವಸ್ಥೆಗೆ ಮುಖ್ಯಮಂತ್ರಿ ಆದೇಶ ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸಭೆ–ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ಕುಡಿಯುವ ನೀರಿಗಾಗಿ ಪ್ಲಾಸ್ಟಿಕ್ ಬಾಟಲ್‌ಗಳನ್ನು ಬಳಸುವಂತಿಲ್ಲ. ಈ ಕುರಿತಂತೆ ಮುಖ್ಯಮಂತ್ರಿ ಅವರು ಹೊಸ ಆದೇಶವನ್ನು ಹೊರಡಿಸಿದ್ದಾರೆ. ಹಿಂದೆಯೇ ಸರ್ಕಾರದಿಂದ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಮತ್ತು ಪರಿಸರ ಸ್ನೇಹಿ ಪರ್ಯಾಯಗಳನ್ನು ಅಳವಡಿಸಲು ಸೂಚನೆ ನೀಡಲಾಗಿತ್ತು. ಈಗ ಆ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಂಬಂಧಿತ ಇಲಾಖೆಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಸಭೆಗಳಲ್ಲಿ ಸ್ಟೀಲ್ ಅಥವಾ ಗಾಜಿನ ಪಾತ್ರೆಗಳಲ್ಲಿ ನೀರಿನ ವ್ಯವಸ್ಥೆ ಮಾಡುವಂತೆಯೂ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ. ಅದರ ಜೊತೆಗೆ, ಮುಖ್ಯಮಂತ್ರಿ ಹಾಗೂ ಸಚಿವರ ಸಭೆಗಳಲ್ಲಿ, ಸಚಿವಾಲಯದಲ್ಲಿ ಹಾಗೂ ರಾಜ್ಯದ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕರ್ನಾಟಕ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್)ಯ ‘ನಂದಿನಿ’ ಉತ್ಪನ್ನಗಳನ್ನು…
ಮುಂದೆ ಓದಿ..
