ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ
ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ. ಮೇಟಿ ನಿಧನ ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ. ಮೇಟಿ (79) ಇಂದು ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರು ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ. ಹುಲ್ಲಪ್ಪ ಯಮನಪ್ಪ ಮೇಟಿ ಎಂದೇ ಪರಿಚಿತರಾದ ಹೆಚ್.ವೈ. ಮೇಟಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿದ್ದರು. 2018ರಲ್ಲಿ ಸೋಲು ಕಂಡಿದ್ದರೂ, ರಾಜಕೀಯ ಹೋರಾಟ ಮುಂದುವರಿಸಿಕೊಂಡು ಮತ್ತೆ ಜನರ ವಿಶ್ವಾಸ ಗೆದ್ದಿದ್ದರು. 2013ರಿಂದ 2016ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಖಾತೆ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಮೇಟಿ, ನಂತರ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ…
ಮುಂದೆ ಓದಿ..
