ದರ್ಶನ್‌ಗೆ ನ್ಯಾಯಾಲಯದ ಆದೇಶವೂ ಫಲ ನೀಡಲಿಲ್ಲ – ಜೈಲಿನಲ್ಲಿ ಸೌಲಭ್ಯಗಳ ಕೊರತೆಯೇ ಮುಂದುವರಿಕೆ..
ದರ್ಶನ್‌ಗೆ ನ್ಯಾಯಾಲಯದ ಆದೇಶವೂ ಫಲ ನೀಡಲಿಲ್ಲ – ಜೈಲಿನಲ್ಲಿ ಸೌಲಭ್ಯಗಳ ಕೊರತೆಯೇ ಮುಂದುವರಿಕೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ಗೆ ಹಾಸಿಗೆ, ಹೊದಿಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ನ್ಯಾಯಾಲಯ ನೀಡಿದ್ದ ಆದೇಶವೂ ಅಸಡ್ಡೆಗೊಳಗಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಲಯದ ನಿರ್ದೇಶನಗಳ ಪಾಲನೆ ಆಗದೆ ಇರುವ ಕುರಿತು ಮತ್ತೆ ವಿವಾದ ಉಕ್ಕಿದೆ. ದರ್ಶನ್‌ನ ಅರ್ಜಿಯ ಮೇರೆಗೆ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಜೈಲಿನಲ್ಲಿನ ಸೌಲಭ್ಯಗಳ ಕುರಿತು ನೇರ ಪರಿಶೀಲನೆ ನಡೆಸಲು ಸೂಚನೆ ನೀಡಿದೆ.ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಸಹ, ಜೈಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ದರ್ಶನ್, ತನ್ನ ಮೇಲೆ ಹಿಂಸೆ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ದೂರಿದ್ದರು. ಸೆ.9ರಂದು ನೀಡಿದ್ದ ಆದೇಶದಂತೆ ಹಾಸಿಗೆ, ಹೊದಿಕೆ, ತಲೆದಿಂಬು ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಬೇಕಿತ್ತು. ಆದರೆ, ಆದೇಶವನ್ನು ನಿರ್ಲಕ್ಷಿಸಿದ ಅಧಿಕಾರಿಗಳ ವಿರುದ್ಧ…
ಮುಂದೆ ಓದಿ..
