ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!
ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ! ರಾಜ್ಯದಾದ್ಯಂತ ಭ್ರಷ್ಟಾಚಾರಕ್ಕೆ ವಿರುದ್ಧವಾಗಿ ಲೋಕಾಯುಕ್ತದ ಭಾರಿ ಆಪರೇಷನ್! ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಬೀದರ್, ಉತ್ತರ ಕನ್ನಡ ಮತ್ತು ಬೆಂಗಳೂರು ನಗರ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ. ಬೆಂಗಳೂರು ನಗರದಲ್ಲಿ ಮೂರು ಕಡೆ ದಾಳಿ ಬೆಂಗಳೂರು ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ 6 ಗಂಟೆಗೆ ಮೂವರು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಮೆಡಿಕಲ್ ಅಧಿಕಾರಿ ಮಂಜುನಾಥ್, ಜಿ.ವಿ. ಪಿಯು ಬೋರ್ಡ್ ನಿರ್ದೇಶಕಿ ಸುಮಂಗಳ, ಸರ್ವೇಯರ್ ಅಧಿಕಾರಿ ಗಂಗಾ ಮರೀಗೌಡ ಇವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತದ ನಾಲ್ಕು ತಂಡಗಳು ಶೋಧ…
ಮುಂದೆ ಓದಿ..
