ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ವಿವಾದ ರಣರಂಗಕ್ಕೆ – ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ..
ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ವಿವಾದ ರಣರಂಗಕ್ಕೆ – ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ.. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣವು ಬುಧವಾರ ರಾತ್ರಿ ತೀವ್ರ ಉದ್ವಿಗ್ನತೆಯಿಂದ ಕಂಗಾಲಾಗಿತ್ತು. ದತ್ತ ಜಯಂತಿ ಬ್ಯಾನರ್ ತೆರವು ವಿಚಾರದಲ್ಲಿ ಆರಂಭವಾದ ಸಣ್ಣ ಗಲಾಟೆ, ಕೊನೆಗೆ ಘೋರ ಅಪರಾಧಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರ ನಿಷ್ಠುರ ಹತ್ಯೆಗೆ ಕಾರಣವಾಗಿದೆ. ಬಜರಂಗ ದಳ ಕಾರ್ಯಕರ್ತರೇ ಆರೋಪಿಗಳು? ಪ್ರಾಥಮಿಕ ತನಿಖೆ ಪ್ರಕಾರ ಸಂಜಯ್ ಮತ್ತು ಮಿಥುನ್ ಎಂಬ ಯುವಕರು ಮಚ್ಚಿನಿಂದ ಗಣೇಶ್ ಮೇಲೆ ದಾಳಿ ನಡೆಸಿ ಸ್ಥಳದಲ್ಲೇ ಕೊಲೆ ಮಾಡಿದ್ದಾರೆ. ಇಬ್ಬರೂ ಬಜರಂಗ ದಳಕ್ಕೆ ಸಂಬಂಧಿಸಿದವರಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಈಗಾಗಲೇ ಐವರನ್ನು ವಶಕ್ಕೆ ಪಡೆದಿದ್ದಾರೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತೀವ್ರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣೇಶ್ ಅವರು ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ಸ್ಥಳೀಯ ರಾಜಕೀಯದಲ್ಲಿ…
ಮುಂದೆ ಓದಿ..
