ಚಪ್ಪಲಿ ಎಸೆಯುವುದು ಯಾವ ರೀತಿಯ ಪ್ರತಿಭಟನೆ……..
ಚಪ್ಪಲಿ ಎಸೆಯುವುದು ಯಾವ ರೀತಿಯ ಪ್ರತಿಭಟನೆ…….. ನ್ಯಾಯಾಂಗದ ಕ್ರಿಯಾಶೀಲತೆಯನ್ನು ಸ್ವಾಗತಿಸುತ್ತಾ, ನ್ಯಾಯಾಧೀಶರ ಅತಿರೇಕದ ಅಕ್ರಮಣಕಾರಿ ಮಾತುಗಳನ್ನು ಖಂಡಿಸುತ್ತಾ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳತ್ತ ಚಪ್ಪಲಿ ಎಸೆದ ದುಷ್ಟ, ಮತಾಂಧ ವಕೀಲರ ನಡೆಯನ್ನು ಪ್ರಬಲವಾಗಿ ವಿರೋಧಿಸುತ್ತಾ, ಮೂಲಭೂತವಾದ ಸಂಪೂರ್ಣವಾಗಿ ತನ್ನ ನೆಲೆಯನ್ನು ವಿಸ್ತರಿಸುವ ಮುನ್ನ ಕ್ರಿಯೆ – ಪ್ರತಿಕ್ರಿಯೆಗಳ ಸುತ್ತ ಒಂದು ಸುತ್ತು……. ವಿರೋಧಿಗಳನ್ನುಕೆಲವರು ಬಾಂಬ್ ಹಾಕಿ ಉಡಾಯಿಸುತ್ತಾರೆ,ಕೆಲವರು ಬಂದೂಕಿನಿಂದ ಗುರಿಯಿಟ್ಟು ಹೊಡೆಯುತ್ತಾರೆ,ಕೆಲವರು ಮಚ್ಚು ಲಾಂಗುಗಳನ್ನು ಬೀಸುತ್ತಾರೆ,ಕೆಲವರು ರಾಡು, ದೊಣ್ಣೆಗಳಿಂದ ದಾಳಿ ಮಾಡುತ್ತಾರೆ,ಕೆಲವರು ಚಾಕುವಿನಿಂದ ಚುಚ್ಚುತ್ತಾರೆ,ಕೆಲವರು ಕಲ್ಲು ಬೀಸುತ್ತಾರೆ,ಕೆಲವರು ಚಪ್ಪಲಿ ಎಸೆಯುತ್ತಾರೆ, ಕೆಲವರು ಪೇಪರ್ ಹರಿದು ಹಾಕುತ್ತಾರೆ,ಕೆಲವರು ಧಿಕ್ಕಾರ ಕೂಗುತ್ತಾರೆ, ಕೆಲವರು ಮೌನವಾಗಿ ಪ್ರತಿಭಟಿಸುತ್ತಾರೆ,ಕೆಲವರು ಕಾನೂನು ಕ್ರಮ ಕೈಗೊಳ್ಳುತ್ತಾರೆ,ಕೆಲವರು ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುತ್ತಾರೆ,ಕೆಲವರು ಸ್ವತಃ ಪತ್ರ ಬರೆದು ಅಥವಾ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ,ಕೆಲವರು ಸಂಬಂಧಪಟ್ಟವರಿಗೆ ದೂರು ನೀಡುತ್ತಾರೆ,ಕೆಲವರು ಎಲ್ಲಾ ಘಟನೆಗಳನ್ನು ನಿರ್ಲಕ್ಷಿಸುತ್ತಾರೆ,ಕೆಲವರು ತಮಗೆ ಸಂಬಂಧವೇ ಇಲ್ಲದಂತೆ ದಿವ್ಯ ಮೌನಕ್ಕೆ…
ಮುಂದೆ ಓದಿ..
