ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವೇಷ ಭಾಷಣಗಳು – ಬರಹಗಳು……..
ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವೇಷ ಭಾಷಣಗಳು – ಬರಹಗಳು…….. ಸುಪ್ರೀಂ ಕೋರ್ಟ್ ಸಹ ಈ ವಿಷಯದಲ್ಲಿ ಗೊಂದಲದಲ್ಲಿದೆ.ಅದರಲ್ಲಿ ಆಶ್ಚರ್ಯವೂ ಇಲ್ಲ. ಬಹುಶಃ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದರ ಅರ್ಥವನ್ನು ಸ್ಪಷ್ಟವಾಗಿ ಹೇಳುವುದು ಸಾಧ್ಯವೇ ಇಲ್ಲ. ಅದನ್ನು ಅನೇಕ ಷರತ್ತುಗಳಿಗೆ ಅನ್ವಯಿಸಿ ಹೇಳಬೇಕಾಗುತ್ತದೆ……… ನಮ್ಮ ಅಭಿಪ್ರಾಯ ಏನಿದೆಯೋ ಅದನ್ನು ಮುಕ್ತವಾಗಿ ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಕರೆಯಬಹುದೇ ? ಹಾಗಾದರೆ,ಒಬ್ಬ ಸಕ್ಕರೆ ಕಹಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಬಹುದು, ಇನ್ನೊಬ್ಬ ಕಾಗೆ ಬೆಳ್ಳಗಿದೆ ಎನ್ನಬಹುದು, ಮತ್ತೊಬ್ಬ ಜಾತಿಯೇ ಶ್ರೇಷ್ಠ ಎಂದು ಹೇಳಬಹುದು, ಮಗದೊಬ್ಬ ಆ ಪಕ್ಷ ದೇಶ ದ್ರೋಹಿ ಎನ್ನಬಹುದು, ಇನ್ಯಾರೋ ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ ಎನ್ನಬಹುದು, ಮತ್ತೊಬ್ಬ ಅಧಿಕಾರಿಗಳೆಲ್ಲಾ ಭ್ರಷ್ಟರು ಎನ್ನಬಹುದು, ಮತ್ಯಾರೋ ಯುವಕರೆಲ್ಲಾ ಕೆಟ್ಟವರು ಎನ್ನಬಹುದು, ಅವರ್ಯಾರೋ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದ ಬಗ್ಗೆ ಇನ್ನೇನೋ ಹೇಳಬಹುದು, ಹೀಗೆ ನಾನಾ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿ ಅದು ನನಗಿರುವ ಅಭಿವ್ಯಕ್ತಿ…
ಮುಂದೆ ಓದಿ..
