ಅಂಕಣ 

ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ………

ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ…… ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ……… ಹೌದು,ರಕ್ತದ ಬಣ್ಣ ಕೆಂಪು,ಗ್ರಹಣದ ಪರಿಣಾಮ ಘೋರ,ರಕ್ತದ ಅರ್ಥ ಸಾವು ನೋವು.ಇದು ಭಯಂಕರ.ನಮ್ಮ ಕನಸಿನ ಚಂದಮಾಮ ರಕ್ತ ವರ್ಣದಲ್ಲಿ,ಇದು ಸಹಜ ಸ್ವಾಭಾವಿಕ ಅಲ್ಲ.ಇದು ಪ್ರಳಯದ ಮುನ್ಸೂಚನೆ….. ಅಲ್ಲೆಲ್ಲೋ ಭೂಕಂಪ, ಇನ್ನೆಲ್ಲೋ ಸುನಾಮಿ, ಮತ್ತೆಲ್ಲೋ ಅಗ್ನಿಯ ನರ್ತನ, ಮಗದೆಲ್ಲೋ ಮೇಘ ಸ್ಪೋಟ, ಅಪಘಾತ, ಅಪರಾಧ, ಅನಾರೋಗ್ಯ, ಬಾಂಬ್ ಸ್ಪೋಟ ಪ್ರಖ್ಯಾತರ ಸಾವು,ಅಬ್ಬಬ್ಬಾ………… ನಿಮ್ಮ ರಾಶಿ ಯಾವುದು,ಅದಕ್ಕೆ ಅನುಗುಣವಾಗಿ ಗ್ರಹಣದ ಪರಿಣಾಮ ನಿಮ್ಮ ಮೇಲೆ. ಭಯವಾಗುತ್ತಿದೆಯೇ……. ಆದರೂ ಇದಕ್ಕೆ ಪರಿಹಾರವೂ ಇದೆ.ಹೋಮ, ಹವನ, ಮಂತ್ರ ತಂತ್ರಗಳನ್ನು ಮಾಡಿ,ಜಪ ತಪ ವ್ರತಗಳನ್ನು ಮಾಡಿ,ನೇಮ ನಿಷ್ಠೆಗಳಿಂದ ಇದ್ದರೆ ಇದರ ಪರಿಣಾಮದ ತೀವ್ರತೆ ಕಡಿಮೆಯಾಗುತ್ತದೆ………. ಇದು ನಿಜವೇ ? ಸುಳ್ಳೇ ? ನಂಬಿಕೆಯೇ ? ಮೂಲ ನಂಬಿಕೆಯೇ ?…

ಮುಂದೆ ಓದಿ..
ಅಂಕಣ ಸುದ್ದಿ 

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ. ಏಕೆಂದರೆ ಭಾನು ಮುಷ್ತಾಕ್ ಎನ್ನುವ ಮಹಿಳೆ ನಿಸರ್ಗದ ಒಂದು ಜೀವಿ. ನಿಸರ್ಗಕ್ಕೆ ಆಕೆ ಹಿಂದು, ಮುಸ್ಲಿಮ, ಹೆಣ್ಣು, ಗಂಡು ಎಂಬ ಯಾವ ಅರಿವೂ ಇರುವುದಿಲ್ಲ. ಉದ್ಘಾಟನೆಯ ವಿಧಾನ ಮತ್ತು ಅದಕ್ಕೆ ಬಳಸಬಹುದಾದ ಹೂವು, ಹಣ್ಣು, ಅರಿಶಿನ, ಕುಂಕುಮ, ಪೂಜೆ, ಮಂತ್ರ, ಅಜಾನ್, ಖುರಾನ್ ಪಠಣ,…

ಮುಂದೆ ಓದಿ..
ಸುದ್ದಿ 

ಆರ್.ಟಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಮಾಡಿದ ಗೂಡ್ಸ್ ವಾಹನ ಚಾಲಕನ ವಿರುದ್ಧ ಪ್ರಕರಣ

ಬೆಂಗಳೂರು :ನಗರದ ಆರ್.ಟಿ ನಗರದ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟುಮಾಡಿದ ಗೂಡ್ಸ್ ವಾಹನ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಾಹಿತಿಯ ಪ್ರಕಾರ, ಸೆಪ್ಟಂಬರ 4 ರಂದು ಬೆಳಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ಕೋಬ್ರಾ–01 ಗಸ್ತು ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಪೊಲೀಸರು ಸಿ.ಬಿ.ಐ ಮುಖ್ಯರಸ್ತೆಯಲ್ಲಿ ಸಂಚಾರ ನಿರ್ವಹಣೆಯಲ್ಲಿದ್ದರು. ಸಂಜೆ ಸುಮಾರು 6.00 ಗಂಟೆಯ ಸಮಯದಲ್ಲಿ ಪ್ಲಾರೆನ್ಸ್ ಶಾಲೆಯ ಎದುರು KA-05-AM-5926 ಸಂಖ್ಯೆಯ ಗೂಡ್ಸ್ ವಾಹನವನ್ನು ಚಾಲಕನು ಮುಖ್ಯರಸ್ತೆಯಲ್ಲೇ ನಿಲ್ಲಿಸಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡಿದ್ದಾನೆ. ಪೊಲೀಸರು ವಾಹನದ ಹತ್ತಿರ ತೆರಳಿ ಚಾಲಕನ ವಿವರಗಳನ್ನು ವಿಚಾರಿಸಿದಾಗ ಆತನು ಶಿವಕುಮಾರ್ (20), ಉಮೇಶ್ ಕುಮಾರ್ ಪುತ್ರ, ರಂಜಿತಪುರ, ಸೀತಾಮಹಿ ಜಿಲ್ಲೆ, ಬಿಹಾರ್ ರಾಜ್ಯ ನಿವಾಸಿ ಎಂದು ತಿಳಿದುಬಂದಿದೆ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಆ ವಾಹನ ಚಾಲಕನ ವಿರುದ್ಧ ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ಪ್ರಕರಣ…

ಮುಂದೆ ಓದಿ..
ಸುದ್ದಿ 

20 ವರ್ಷದ ಯುವಕ ಕಾಣೆಯಾಗಿದ್ದಾನೆ – ಪೋಷಕರಲ್ಲಿ ಆತಂಕ

ಬೆಂಗಳೂರು,ನಗರದ ವಿಕಾಸ್ ಎನ್.ಜಿ (20) ಎಂಬ ಯುವಕ ಕಳೆದ ಸೆಪ್ಟೆಂಬರ್ 2ರ ರಾತ್ರಿ ಮನೆಯಿಂದ ಹೊರಟ ಬಳಿಕ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ತಿಳಿಸಿದಂತೆ, ವಿಕಾಸ್ ರಾತ್ರಿ 8 ಗಂಟೆಯ ಸುಮಾರಿಗೆ ಮನೆಯಿಂದ ಪಲ್ಸರ್ ಬೈಕ್ (ನಂಬರ: KA-41-EW-9470) ತೆಗೆದುಕೊಂಡು ಹೋದನು. ಆದರೆ ನಂತರ ಮನೆಗೆ ವಾಪಸಾಗದೆ ಕಾಣೆಯಾಗಿದ್ದಾನೆ. ಕುಟುಂಬಸ್ಥರು ಮತ್ತು ಬಂಧುಗಳು ಆತುರದಿಂದ ತಮ್ಮ ಮಟ್ಟಿಗೆ ಎಲ್ಲೆಡೆ ಹುಡುಕಾಟ ನಡೆಸಿದರೂ, ವಿಕಾಸ್‌ನ ಸುಳಿವು ಸಿಕ್ಕಿಲ್ಲ. ಹೀಗಾಗಿ ಪೋಷಕರಾದ ಗಿರೀಶ್ (48) ಅವರು ಈ ಕುರಿತು ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದು– ವಿಕಾಸ್ ಎನ್.ಜಿ ಕುರಿತಾಗಿ ಯಾರಿಗಾದರೂ ಮಾಹಿತಿ ದೊರೆತಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಜಗತ್ತಿನ ಶಿಕ್ಷಕ……. ಒಂದು ಪಾಠ……

ಜಗತ್ತಿನ ಶಿಕ್ಷಕ…….ಒಂದು ಪಾಠ…… ಶಿಕ್ಷಕರ ದಿನದಂದು ಜಗತ್ತಿನ ಅತಿ ಬುದ್ಧಿವಂತ ಆಲ್ಬರ್ಟ್ ಐನ್ ಸ್ಟೈನ್ ಅವರನ್ನು ನೆನೆಯುತ್ತಾ ಒಂದು ಸಂಕಲ್ಪ. ” ಮೂರು ಮಹಾನ್ ಶಕ್ತಿಗಳು ಜಗತ್ತನ್ನು ಆಳುತ್ತವೆ. ಅವೆಂದರೆ,ಮೂರ್ಖತನ – ಭಯ – ದುರಾಸೆ…..* ಆಲ್ಬರ್ಟ್ ಐನ್ಸ್ಟೈನ್…ಜಗತ್ತಿನ ಅತ್ಯಂತ ಬುದ್ದಿವಂತ ಎಂದು ಕರೆಯಲ್ಪಡುವ ವಿಜ್ಞಾನಿ…. ಇದಕ್ಕೆ ವಿರುದ್ಧ ಪದಗಳು. ಮೂರ್ಖತನ × ಬುದ್ದಿವಂತಿಕೆ,ಭಯ × ಧೈರ್ಯ,ದುರಾಸೆ × ಆಸೆ,……. ಚಿಂತನೆಗೆ ಹಚ್ಚುವ ಬಹುಮುಖ್ಯ ವಿಷಯವಿದು. ಒಂದು ರೀತಿಯಲ್ಲಿ ನಮ್ಮೊಳಗೆ ಒಂದು ಆತ್ಮಾವಲೋಕನ ಪ್ರಕ್ರಿಯೆಗೆ ಚಾಲನೆ ನೀಡಬಹುದಾದ ವಿಷಯವಿದು. ವ್ಯಕ್ತಿಗತವಾಗಿ ಇದನ್ನು ಹೇಳಿರುವುದು ಜಗತ್ತಿನ ಅತ್ಯಂತ ಬುದ್ದಿವಂತ ವ್ಯಕ್ತಿ. ಆದ್ದರಿಂದ ಇದು ಪರಿಶೀಲನೆಗೆ ಅರ್ಹ ಎಂದು ಭಾವಿಸುತ್ತೇನೆ….. ಭಾರತದ ಮಟ್ಟಿಗೆ ಈ ಮೂರು ಅಂಶಗಳು ಬಹುತೇಕ ಸತ್ಯ ಮತ್ತು ವಾಸ್ತವ. ನೇರವಾಗಿ ಹೇಳಬೇಕೆಂದರೆ ಈ ಸಮಾಜದೊಂದಿಗಿನ ನನ್ನ ಅನುಭವದಲ್ಲಿ ರೂಪಗೊಂಡಿರುವ ಅಭಿಪ್ರಾಯವೆಂದರೆ ಭಾರತದ ಮಧ್ಯಮ ವರ್ಗದ ಜನ…

ಮುಂದೆ ಓದಿ..
ಅಂಕಣ 

ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು……

ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು…… ” ಜಾತಿ ಧರ್ಮದ ಭೇದವಿಲ್ಲದೆ ಸೇವೆ ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರ ಮನಸ್ಸು ನೋಯಿಸಿದರೆ ಸಮಾಜವೇ ನಾಶವಾಗಲಿದೆ “ದವಳ ಕೀರ್ತಿ ಭಟ್ಟಾರಕ ಸ್ವಾಮೀಜಿ ಅರಿಹಂತಗಿರಿಜೈನ ಮಠ ಚೆನ್ನೈ. ” ದುಃಖ ದುಮ್ಮಾನ ಮರೆಯಲು ಬರುವ ಪವಿತ್ರವಾದ ಜಾಗ ಧರ್ಮಸ್ಥಳವನ್ನು ಅಗೆದಾಗಲೇ ಕುತಂತ್ರಿಗಳಿಗೆ ಕೇಡುಗಾಲ ಶುರುವಾಗಿದೆ “ಭುವನ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಕನಕಗಿರಿ. ” ಹೆಗ್ಗಡೆಯವರು ದೊಡ್ಡ ಪರೀಕ್ಷೆ ಎದುರಿಸಿ ಅದರಲ್ಲಿ ರ್ಯಾಂಕ್ ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಇನ್ನು ಆತಂಕ ಪಡುವಂತಹುದು ಏನು ಇಲ್ಲ “ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಶ್ರವಣಬೆಳಗೊಳ ಜೈನ ಮಠ. ಭಾರತದ ನೆಲದಲ್ಲಿ ಸೃಷ್ಟಿಯಾದ ಪುರಾತನ ಧರ್ಮಗಳಲ್ಲಿ ಜೈನ ಧರ್ಮವೂ ಒಂದು. ಸತ್ಯ, ಅಹಿಂಸೆ, ತ್ಯಾಗ, ಮೋಕ್ಷ, ಸಹಿಷ್ಣುತೆ ಈ ಧರ್ಮದ ಮೂಲ ಮತ್ತು ಮುಖ್ಯ ಆಶಯಗಳು. ಅದರಲ್ಲೂ ಪ್ರಾಣಿ ಹಿಂಸೆಯನ್ನು ಅತ್ಯುಘ್ರವಾಗಿ ಖಂಡಿಸುವ, ಸಂಪೂರ್ಣ ಸಸ್ಯಾಹಾರವನ್ನೇ…

ಮುಂದೆ ಓದಿ..
ಸುದ್ದಿ 

ಸವಿ ನೆನಪುಗಳು ಬೇಕು ಸವಿಯಲೀ ಬದುಕು……

ಸವಿ ನೆನಪುಗಳು ಬೇಕು ಸವಿಯಲೀ ಬದುಕು…… ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ – ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ? ಅಥವಾ, ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ? ಅಥವಾ, ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ…… ಅಥವಾ, ಸಾಹಿತ್ಯ ಧ್ವನಿ ವಾದ್ಯಗಳ ಮಿಲನದ ಪ್ರಕ್ರಿಯೆಯೇ ಸಂಗೀತವೇ…… ಅಥವಾ, ಧ್ವನಿಯ ಸ್ವರ ಲಯ ತಾಳಗಳ ರೂಪವೇ ಸಂಗೀತ ಸೃಷ್ಟಿಸುತ್ತದೆಯೇ….. ಅದರ ನಿಜವಾದ ಅರ್ಥ ಏನೇ ಇರಲಿ ಮನುಷ್ಯ ಜೀವಿಯ ಬದುಕಿನಲ್ಲಿ ಅತಿಹೆಚ್ಚು ಆಕರ್ಷಕ ಧ್ವನಿ ಎಂದರೆ ಅದು ಸಾಮಾನ್ಯವಾಗಿ ಹಾಡುಗಳು ಎಂದು ಕರೆಯಲ್ಪಡುವ ಧ್ವನಿ ತರಂಗಗಳು……. ಬಹುಶಃ ಹುಟ್ಟಿದ ಮಗುವಿನಿಂದ ವೃದ್ದರವರೆಗೆ ಒಂದಲ್ಲ ಒಂದು ರೀತಿಯ ಹಾಡುಗಳ ಮೋಹ ಅವರ ಮನಸ್ಸುಗಳ ಮೇಲೆ ಪ್ರಭಾವ ಬೀರುವುದನ್ನು ಕಾಣಬಹುದು…… ಕೇವಲ ಭಾರತ ದೇಶ ಮಾತ್ರವಲ್ಲ ಇಡೀ ಸೃಷ್ಟಿಯ ಮನುಷ್ಯ ಪ್ರಾಣಿಯ ಎಲ್ಲರಿಗೂ ಇದು…

ಮುಂದೆ ಓದಿ..
ಅಂಕಣ 

ಶಿಕ್ಷಕರ ಆತ್ಮಾವಲೋಕನ……

ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ –ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ –ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ…….. ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…….. ಅಕ್ಷರ ಕಲಿಸುವವರು ನೀವಲ್ಲವೇ – ಅಧ್ಯಯನ ಮಾಡಲು ಮಾರ್ಗ ಸೂಚಿಸುವವರು ನೀವಲ್ಲವೇ –ಚಿಂತಿಸಲು ಪ್ರೇರೇಪಿಸುವವರು ನೀವಲ್ಲವೇ –ಅನ್ಯಾಯದ ವಿರುದ್ಧ ಸಿಡಿದೇಳಲು ಪ್ರೋತ್ಸಾಹಿಸುವವರು ನೀವಲ್ಲವೇ –ಬದುಕು ರೂಪಿಸಿಕೊಳ್ಳಲು ಸಹಾಯ ಮಾಡುವವರು ನೀವಲ್ಲವೇ…… ಭ್ರಷ್ಟ ವ್ಯವಸ್ಥೆಯ ವಿರುದ್ಧ ನೀವೇ ಮೌನವಾದರೆ,ಮೌಢ್ಯಗಳ ವಿರುದ್ಧ ನೀವೇ ಮೌನವಾದರೆ,ಜಾತಿ ಪದ್ದತಿಯ ವಿರುದ್ಧ ನೀವೇ ಮೌನವಾದರೆ,ಚುನಾವಣಾ ಅಕ್ರಮಗಳ ವಿರುದ್ಧ ನೀವೇ ಮೌನವಾದರೆ ಸಮಾಜದ ಭವಿಷ್ಯವೇನು…… ಸತ್ಯದ ಪರವಾಗಿ ಮಾತನಾಡಲು ಹೇಳಿ ಕೊಟ್ಟವರು ನೀವು,ದೇಶ ಭಕ್ತಿಯ ಪಾಠ ಮಾಡಿದವರು ನೀವು,ಮಾನವೀಯ ಮೌಲ್ಯಗಳನ್ನು ಬಿತ್ತಿದವರು ನೀವು,ಸಂವಿಧಾನ…

ಮುಂದೆ ಓದಿ..
ಅಂಕಣ 

ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು……

ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು…… ಇಸ್ರೇಲ್ ಎಂಬ ದೇಶದ ಅದ್ಭುತ ಸಾಮರ್ಥ್ಯ ಮತ್ತು ಅಮಾನವೀಯ ಕ್ರೌರ್ಯ, ಹಾಗೆಯೇ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟ ಹಾಗೂ ಚೀನಾ ಮತ್ತು ರಷ್ಯಾ ಇವುಗಳ ನಡುವೆ ಯಾರು ಹಿತವರು ಭಾರತಕ್ಕೆ ಎಂಬ ಎರಡು ಬಹುಮುಖ್ಯ ಅಂತಾರಾಷ್ಟ್ರೀಯ ಸುದ್ದಿಗಳ ಸುತ್ತಾ ಒಂದು ಸುತ್ತು….. ಇಡೀ ವಿಶ್ವದಲ್ಲಿ ಇಸ್ರೇಲ್ ಎಂಬ ಯಹೂದಿ ಸಮುದಾಯದ ದೇಶ ತನ್ನ ಬುದ್ಧಿಶಕ್ತಿ, ದೂರ ದೃಷ್ಟಿ, ಅದ್ಭುತ ಪ್ರಗತಿ, ಬಲಾಢ್ಯ ಸೈನಿಕ ಶಕ್ತಿ, ಆಧುನಿಕ ತಂತ್ರಜ್ಞಾನ ಮುಂತಾದ ವಿಷಯಗಳಲ್ಲಿ ಜಗತ್ತಿಗೆ ಒಂದು ಮಾದರಿಯಾಗಿ ನಿಲ್ಲುತ್ತದೆ. ದೇಶವೆಂದರೆ ಹೀಗಿರಬೇಕು ಎನಿಸುವಷ್ಟು ಇಸ್ರೇಲಿನ ಬಗ್ಗೆ ವಿವಿಧ ಕ್ಷೇತ್ರದಲ್ಲಿ ಸಾಕಷ್ಟು ಒಳ್ಳೆಯ ಮಾಹಿತಿಗಳು ಸಿಗುತ್ತವೆ. ಹಾಗೆಯೇ ಬಹುಶಃ ಜಗತ್ತಿನ ಕೆಲವೇ ಕೆಲವು ಐತಿಹಾಸಿಕ ಹಿಂಸಾತ್ಮಕ ಘಟನೆಗಳನ್ನು ಹೊರತುಪಡಿಸಿದರೆ, ಜರ್ಮನಿಯ ಹಿಟ್ಲರ್ ನಿಂದ ತಮ್ಮ ಸಮುದಾಯಕ್ಕೆ ಆದ ಅಮಾನುಷ ದೌರ್ಜನ್ಯದ ಪ್ರತಿಫಲವೋ ಏನೋ ಇಸ್ರೇಲಿನ ಇತ್ತೀಚಿನ…

ಮುಂದೆ ಓದಿ..
ಸುದ್ದಿ 

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ…..

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ….. ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40/50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅದರಲ್ಲೂ ಪ್ರಾಕೃತಿಕ, ರಾಜಕೀಯ ಮತ್ತು ಕೆಲವು ದುರಂತ ಘಟನೆಗಳ ಬಗ್ಗೆ ಅವರು ನುಡಿದ ಭವಿಷ್ಯಗಳು ಸಾಮಾನ್ಯವಾಗಿ ನಿಜವಾಗುತ್ತದೆ….. ಹಾಗಾದರೆ ಸ್ವಾಮೀಜಿಗಳ ಭವಿಷ್ಯ ನಿಜವೇ, ಅವರಿಗೆ ಆ ಶಕ್ತಿ ಇದೆಯೇ ಅಥವಾ ಅದೊಂದು ಅನುಭವದ ಮಾತುಗಳೇ, ಆಳ ಅಧ್ಯಯನದ ಚಿಂತನೆಯೇ, ದೂರ ದೃಷ್ಟಿಯೇ ಅಥವಾ ಅವರೊಳಗಿನ, ಪ್ರತಿಭೆಯೇ, ಅವರು ವಿಶೇಷ ಸಾಮರ್ಥ್ಯವೇ,ವೈಚಾರಿಕತೆಯೇ, ವೈಜ್ಞಾನಿಕವೇ, ಮೂಡನಂಬಿಕೆಯೇ ಹೀಗೆ ಪ್ರಶ್ನೆಗಳು ಸಾಮಾನ್ಯ ಜನರಲ್ಲಿ ಉದ್ಭವವಾಗುತ್ತದೆ….. ಪ್ರಾಕೃತಿಕವಾಗಿ, ಸಹಜವಾಗಿ ಹೇಳುವುದಾದರೆ ಭವಿಷ್ಯವನ್ನು ಊಹಿಸಿ ಖಚಿತವಾಗಿ ಹೇಳುವುದು ಯಾರಿಂದಲೂ ಸಾಧ್ಯವಿಲ್ಲ. ವಿಜ್ಞಾನವು ಕೂಡ ಆ ವಿಷಯದಲ್ಲಿ ಸಂಪೂರ್ಣ ಸತ್ಯ ಎಂದು ಹೇಳಲು ಆಗುವುದಿಲ್ಲ. ಏಕೆಂದರೆ ಭವಿಷ್ಯದ ಘಟನೆಗಳು ಎಲ್ಲಾ…

ಮುಂದೆ ಓದಿ..