ಭತ್ತದ ರಾಶಿಯ ರೈತ,ಚಿನ್ನದ ಅಂಬಾರಿಯ ರಾಜ,ದಸರಾ ಉದ್ಘಾಟನೆಯ ರಾಜಕೀಯ……..
ಭತ್ತದ ರಾಶಿಯ ರೈತ,ಚಿನ್ನದ ಅಂಬಾರಿಯ ರಾಜ,ದಸರಾ ಉದ್ಘಾಟನೆಯ ರಾಜಕೀಯ…….. ದಸರಾ ಉದ್ಘಾಟನೆ ಮಾಡುವವರ ಬಗ್ಗೆ ವಾದ ವಿವಾದಗಳು ಸಾಕಷ್ಟು ಕಾವೇರಿ ಇರುವಾಗ,ಕಾವೇರಿಯ ತಟದ ಕಾಯಕ ಜೀವಿ, ಉಳುವ ಯೋಗಿ ಮಣ್ಣಿನ ಮಗನೊಬ್ಬನ ಸ್ವಗತ……. ನಾನು ರಾಜನಲ್ಲ,ನಾನೊಬ್ಬ ಸಾಮಾನ್ಯ ಕೃಷಿಕ, ನನಗೆ ಅರಮನೆ ಇಲ್ಲ,ನನಗಿರುವುದು ಹೆಂಚಿನ ಮನೆ, ನಾನು ಆನೆಯ ಮೇಲೆ ಕುಳಿತು ಓಡಾಡುವವನಲ್ಲ,ಎತ್ತಿನ ಗಾಡಿಯಲ್ಲಿ ಕಬ್ಬು ಸಾಗಿಸುವವನು ನಾನು, ಸಿಂಹಾಸನ ಮೇಲೆ ಕುಳಿತುಕೊಳ್ಳುವವ ನಾನಲ್ಲ,ಹುಲ್ಲು ಹಾಸಿನ ಮೇಲೆ ಮಲಗುವವ ನಾನು, ಛತ್ರ ಚಾಮರ ಬೀಸಣಿಕೆಯ ತಂಪು ಗಾಳಿ ನನಗಿಲ್ಲ,ಬಿಸಿಲಿನ ಝಳದಲ್ಲಿ, ಗಾಳಿಯ ರಭಸಕ್ಕೆ ಭತ್ತದ ರಾಶಿಯ ಹೊಟ್ಟು ತೂರುವವನು ನಾನು, ಭಕ್ಷ್ಯ ಭೋಜನ ತಿನ್ನುವವನಲ್ಲ,ರಾಗಿ, ರೊಟ್ಟಿ, ಜೋಳ, ಮೆಣಸಿನಕಾಯಿ, ಸೊಪ್ಪು, ಗೊಜ್ಜು ತಿನ್ನುವವನು ನಾನು, ಆಳು ಕಾಳು, ಸೇವಕ, ಸೈನಿಕರು ನನಗಿಲ್ಲ,ನನಗೆ ನಾನೇ ಕಾಲಾಳು, ಮೈತುಂಬ ವೈಭವೋಪೇತ ಬಟ್ಟೆ ತೊಡಲು ನಾನು ಅರಸನಲ್ಲ,ಪಂಚೆ, ಜುಬ್ಬ ಕೆಲವೊಮ್ಮೆ ಬರಿಮೈ…
ಮುಂದೆ ಓದಿ..
