ಅನೇಕಲ್‍ನಲ್ಲಿ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ನದೊಡ್ಡಿ ಗ್ರಾಮದಲ್ಲಿ ಮಧ್ಯಾಹ್ನದ ವೇಳೆ ಮನೆ ಬಾಗಿಲು ಮುರಿದು ಕೃತ್ಯ ಅನೇಕಲ್, ಜುಲೈ 26, 2025:
ಅನೇಕಲ್ ತಾಲೂಕಿನ ನದೊಡ್ಡಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಅಪರಿಚಿತ ಕಳ್ಳರು ಮನೆಯ ಬಾಗಿಲು ಮುರಿದು ಒಳನುಗ್ಗಿ ಸಾವಿರಾರು ರೂಪಾಯಿ ಮೌಲ್ಯದ ಚಿನ್ನಾಭರಣಗಳು ಹಾಗೂ ನಗದು ಹಣವನ್ನು ದೋಚಿದ್ದಾರೆ. ಘಟನೆಯಲ್ಲಿ ಮನೆ ಮಾಲೀಕರೊಬ್ಬರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ವೆಂಕಟೇಶ್ ಬಿನ್ ಲೇಟ್ ಕರಿಯಪ್ಪ ಎಂಬವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ನದೊಡ್ಡಿ ಗ್ರಾಮದಲ್ಲಿ ವಾಸವಾಗಿದ್ದಾರೆ. ಅವರು ಕೆ.ಟಿ.ಟಿ.ಎಂ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಾರೆ. ಅವರ ಪತ್ನಿ ಸೆಡ್ ಎಂಬ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಜುಲೈ 26 ರಂದು ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದರು. ಮಕ್ಕಳೂ ತಮ್ಮ ವಿದ್ಯಾಭ್ಯಾಸ ಹಾಗೂ ಉದ್ಯೋಗಕ್ಕೆ ಮನೆಯಿಂದ ಹೊರಟಿದ್ದರು. ವೆಂಕಟೇಶ್ ಅವರು ಮಧ್ಯಾಹ್ನ 2 ಗಂಟೆಗೆ ಬ್ಯಾಂಕಿಗೆ ಹೋಗುವ ಸಲುವಾಗಿ ಮನೆಯಿಂದ ಹೊರಟಿದ್ದರು. ಅವರು ಮನೆಗೆ ಬಾಗಿಲು ಹಾಕಿಕೊಂಡು ಹೊರಟಿದ್ದು, ಸಂಜೆ ಸುಮಾರು 6:30ರ ಸಮಯದಲ್ಲಿ ಪತ್ನಿಯನ್ನು ಕರೆದುಕೊಂಡು ಹಿಂದಿರುಗಿದಾಗ ಮನೆಯ ಮುಂಭಾಗದ ಬಾಗಿಲು ಮುರಿದ ಸ್ಥಿತಿಯಲ್ಲಿ…
ಮುಂದೆ ಓದಿ..
