ಮೂಲ – ಅನುವಾದ – ರೂಪಾಂತರ – ಭಾಷಾಂತರ ಇತ್ಯಾದಿ ಇತ್ಯಾದಿ…….
ಮೂಲ – ಅನುವಾದ – ರೂಪಾಂತರ – ಭಾಷಾಂತರ ಇತ್ಯಾದಿ ಇತ್ಯಾದಿ……. ಮೂಲ ಕೃತಿ ಮತ್ತು ಅನುವಾದ ಅಥವಾ ಭಾಷಾಂತರ, ಮೂಲ ಸಿನಿಮಾ ಅಥವಾ ರಿಮೇಕ್ ಸಿನಿಮಾ ಇವುಗಳಲ್ಲಿ ಯಾವುದಕ್ಕೆ ಹೆಚ್ಚಿನ ಮಹತ್ವ ನೀಡಬೇಕು, ಯಾವುದು ಅತಿ ಹೆಚ್ಚು ಕ್ರಿಯಾತ್ಮಕತೆಯನ್ನು ಹೊಂದಿರುತ್ತದೆ ಎಂಬ ಚರ್ಚೆಯ ಸುತ್ತ ಇನ್ನೊಂದಿಷ್ಟು ಅಭಿಪ್ರಾಯಗಳು….. ಇತ್ತೀಚೆಗೆ ಎದೆಯ ಹಣತೆ ಎಂಬ ಕನ್ನಡದ ಮೂಲ ಕೃತಿಯ ಅನುವಾದ Heart lamp ಎಂಬ ಇಂಗ್ಲಿಷ್ ಕೃತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿತು. ಅದರ ಮೂಲ ಭಾನು ಮುಷ್ತಾಕ್ ಅವರು ಬರೆದ ಕನ್ನಡ ಭಾಷೆಯ ಕೃತಿ. ಅದನ್ನು ಅತ್ಯಂತ ಅಚ್ಚುಕಟ್ಟಾಗಿ ಇಂಗ್ಲೀಷಿಗೆ ಅನುವಾದಿಸಿದವರು ದೀಪಾ ಭಾಸ್ತಿ. ಆ ಪ್ರಶಸ್ತಿಯನ್ನು ಮತ್ತು ಪ್ರಶಸ್ತಿಯ ಮೊತ್ತವನ್ನು ಇಬ್ಬರಿಗೂ ಸಮನಾಗಿ ಹಂಚಲಾಗಿದೆ. ಈ ಸಂದರ್ಭದಲ್ಲಿ ಅನುವಾದಕರಿಗೆ ಸಹ ಮೂಲ ಕೃತಿಯ ಲೇಖಕರಷ್ಟೇ ಮಹತ್ವ ನೀಡಬೇಕು ಎಂಬುದಾಗಿ ಒಂದಷ್ಟು ಚರ್ಚೆಗಳು ನಡೆಯುತ್ತಿವೆ.…
ಮುಂದೆ ಓದಿ..
