ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ………
ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ…… ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ……… ಹೌದು,ರಕ್ತದ ಬಣ್ಣ ಕೆಂಪು,ಗ್ರಹಣದ ಪರಿಣಾಮ ಘೋರ,ರಕ್ತದ ಅರ್ಥ ಸಾವು ನೋವು.ಇದು ಭಯಂಕರ.ನಮ್ಮ ಕನಸಿನ ಚಂದಮಾಮ ರಕ್ತ ವರ್ಣದಲ್ಲಿ,ಇದು ಸಹಜ ಸ್ವಾಭಾವಿಕ ಅಲ್ಲ.ಇದು ಪ್ರಳಯದ ಮುನ್ಸೂಚನೆ….. ಅಲ್ಲೆಲ್ಲೋ ಭೂಕಂಪ, ಇನ್ನೆಲ್ಲೋ ಸುನಾಮಿ, ಮತ್ತೆಲ್ಲೋ ಅಗ್ನಿಯ ನರ್ತನ, ಮಗದೆಲ್ಲೋ ಮೇಘ ಸ್ಪೋಟ, ಅಪಘಾತ, ಅಪರಾಧ, ಅನಾರೋಗ್ಯ, ಬಾಂಬ್ ಸ್ಪೋಟ ಪ್ರಖ್ಯಾತರ ಸಾವು,ಅಬ್ಬಬ್ಬಾ………… ನಿಮ್ಮ ರಾಶಿ ಯಾವುದು,ಅದಕ್ಕೆ ಅನುಗುಣವಾಗಿ ಗ್ರಹಣದ ಪರಿಣಾಮ ನಿಮ್ಮ ಮೇಲೆ. ಭಯವಾಗುತ್ತಿದೆಯೇ……. ಆದರೂ ಇದಕ್ಕೆ ಪರಿಹಾರವೂ ಇದೆ.ಹೋಮ, ಹವನ, ಮಂತ್ರ ತಂತ್ರಗಳನ್ನು ಮಾಡಿ,ಜಪ ತಪ ವ್ರತಗಳನ್ನು ಮಾಡಿ,ನೇಮ ನಿಷ್ಠೆಗಳಿಂದ ಇದ್ದರೆ ಇದರ ಪರಿಣಾಮದ ತೀವ್ರತೆ ಕಡಿಮೆಯಾಗುತ್ತದೆ………. ಇದು ನಿಜವೇ ? ಸುಳ್ಳೇ ? ನಂಬಿಕೆಯೇ ? ಮೂಲ ನಂಬಿಕೆಯೇ ?…
ಮುಂದೆ ಓದಿ..
