ಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಒಳ ಮೀಸಲಾತಿ……..
ಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಒಳ ಮೀಸಲಾತಿ…….. ಅಲೆಮಾರಿಗಳ ಅಲೆದಾಟಕ್ಕೆ ಪೂರ್ಣವಿರಾಮ ನೀಡಬೇಕಾದ ಸಮಯ ಬಂದಿದೆ. ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ ಊಟ, ಬಟ್ಟೆ ಮತ್ತು ವಸತಿ ಬಹಳ ಮುಖ್ಯವಾದದ್ದು. ಆಧುನಿಕ ನಾಗರಿಕ ಸಮಾಜ ಅಭಿವೃದ್ಧಿ ಹೊಂದಿದಂತೆ ಊಟ, ಬಟ್ಟೆಗಿಂತ ಮನೆ ಎಂಬ ವಾಸ ಸ್ಥಳವೇ ಬಹುಮುಖ್ಯವಾಯಿತು. ಪ್ರತಿಯೊಬ್ಬರೂ ಮುಖ್ಯವಾಗಿ ಮಧ್ಯಮ ವರ್ಗದವರು ಮತ್ತು ಬಡವರ ಜೀವನದ ಬಹುದೊಡ್ಡ ಆಸೆ ಸ್ವಂತ ಮನೆ ಹೊಂದುವುದು. ಆದರೆ ಇಲ್ಲಿ ನೆಲೆಯೇ ಇಲ್ಲದ ಅಲೆಮಾರಿ ಬುಡಕಟ್ಟು ಜನಾಂಗದ ಈಗ ಮುಖ್ಯ ವಾಹಿನಿಯ ಗಮನ ಸೆಳೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ಒಳ ಮೀಸಲಾತಿಯ ವಿಷಯ ವಿವಾದವಾಗಿ, ಕೊನೆಗೆ ಪರಿಹಾರ ರೂಪದಲ್ಲಿ ಒಂದು ಸೂತ್ರ ಸಿದ್ಧವಾಗಿದೆ. ಆ ಸೂತ್ರದ ಪ್ರಕಾರ ಅಲೆಮಾರಿ ಜನಾಂಗವನ್ನು ಮೂರನೇ ವರ್ಗಕ್ಕೆ ಸೇರಿಸಿ ಅಲ್ಲಿಯ ಬಲಿಷ್ಠರೊಂದಿಗೆ ಸ್ಪರ್ಧಿಸಲು ಹೇಳಿರುವುದರಿಂದ ಅಲೆಮಾರಿ ಸಮುದಾಯದ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂಬ ಕೂಗು ಎಲ್ಲೆಡೆಯೂ ಕೇಳಿ ಬರುತ್ತಿದೆ…
ಮುಂದೆ ಓದಿ..
