ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……
ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ…… ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ, ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಪಾಡಿಗೆ ನಾವಿದ್ದರೆ ಖಂಡಿತವಾಗಲೂ ಮುಂದಿನ ದಿನಗಳು ನಮ್ಮ ಬುಡಕ್ಕೆ ಈ ಸಮಸ್ಯೆ ಬರಬಹುದು. ಏಕೆಂದರೆ ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಗಲಭೆಗಳು ಸಾಮಾನ್ಯವಾಗುತ್ತಿದೆ. ಅದರ ಅರ್ಥ ಮನಸ್ಸುಗಳು ಧರ್ಮದ ಆಧಾರದ ಮೇಲೆ ಒಡೆದು ಹೋಗುತ್ತಿದೆ. ಇದಕ್ಕೆ ಆ ಕ್ಷಣದ ಆ ಘಟನೆಯಾ ಮೇಲೆ ಚರ್ಚೆ ಮಾಡಿಕೊಂಡು ಒಂದು ನಿರ್ಧಾರಕ್ಕೆ ಬರುವುದು ತೀರ ಬಾಲಿಶವಾದದ್ದು. ವ್ಯವಸ್ಥೆ ಮತ್ತು ಅದು ಸಾಗುತ್ತಿರುವ ದಿಕ್ಕನ್ನು ನಾವು ಸೂಕ್ಷ್ಮವಾಗಿ ಅವಲೋಕಿಸಬೇಕಿದೆ. ನಮ್ಮನ್ನು ಕಾಪಾಡಬೇಕಾಗಿದ್ದ ದೇವರು, ನಮ್ಮನ್ನು ರಕ್ಷಿಸಿ ಕ್ರಮಬದ್ಧ ಜೀವನಶೈಲಿ ರೂಪಿಸಬೇಕಾಗಿದ್ದ ಧರ್ಮಗಳು ಇಂದು ನಮ್ಮನ್ನು ವಿಭಜಿಸಿರುವುದು ಮಾತ್ರವಲ್ಲದೆ ದೇವರು ಧರ್ಮವನ್ನು ಉಳಿಸಬೇಕಾದ ಪರಿಸ್ಥಿತಿ…
ಮುಂದೆ ಓದಿ..
