ದಿಢೀರ್ ಸಾವುಗಳ ಸುತ್ತಾ…..ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ ಯುವತಿಯರು..
ದಿಢೀರ್ ಸಾವುಗಳ ಸುತ್ತಾ….. ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ ಯುವತಿಯರು, ವಿದ್ಯಾರ್ಥಿಗಳು ಹೃದಯಘಾತದಿಂದ ದಿಢೀರನೆ ಯಾವುದೇ ಪೂರ್ವ ಮುನ್ಸೂಚನೆ ಇಲ್ಲದೆ ಸಾಯುತ್ತಿರುವುದು ಹೆಚ್ಚಾಗುತ್ತಿದೆ. ಅದಕ್ಕೆ ಹಲವಾರು ಕಾರಣಗಳು ಇರಬಹುದು. ಅದನ್ನು ವೈದ್ಯಕೀಯ ಸಂಶೋಧನಾ ಕ್ಷೇತ್ರ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ ಮತ್ತು ಸರ್ಕಾರವು ಆ ನಿಟ್ಟಿನಲ್ಲಿ ಪ್ರಯತ್ನ ಪಡಲಿ…… ಆದರೆ ಈ ಕ್ಷಣದಲ್ಲಿ ಆ ವಿಷಯಗಳ ಬಗ್ಗೆ ನಾವು ಹೊಂದಬಹುದಾದ ಕೆಲವು ಮಾನಸಿಕ ಮತ್ತು ದೈಹಿಕ ಪೂರ್ವ ತಯಾರಿಗಳ ಬಗ್ಗೆ ನನ್ನ ವೈಯಕ್ತಿಕ ಅನಿಸಿಕೆ. ಯಾರಿಗೂ ಮನುಷ್ಯನ ಆಯಸ್ಸಿನ ಬಗ್ಗೆ, ಮನುಷ್ಯನ ಬದುಕಿನ ಬಗ್ಗೆ ಸಂಪೂರ್ಣ ಖಚಿತತೆ ಇರುವುದಿಲ್ಲ. ನಾವು ವಾಸಿಸುವ ಪ್ರದೇಶದ ವಾತಾವರಣಕ್ಕೆ ಅನುಗುಣವಾಗಿ, ನಮ್ಮ ಅನುವಂಶೀಯ ದೇಹ ಪ್ರಕೃತಿಯ ಅನುಸಾರವಾಗಿ, ನಮ್ಮ ಬುದ್ಧಿ ಶಕ್ತಿಯ ಬೆಳವಣಿಗೆಯ ರೀತಿಗೆ ತಕ್ಕಂತೆ, ನಮ್ಮ ಆಡಳಿತ ವ್ಯವಸ್ಥೆ ಮತ್ತು ಒಟ್ಟು ವ್ಯವಸ್ಥೆಗೆ ನಾವು ಪ್ರತಿಕ್ರಿಯಿಸುವ ರೀತಿ ಸಾಮಾನ್ಯವಾಗಿ…
ಮುಂದೆ ಓದಿ..
