ಬಾಲಕನ ಅಪಹರಿಸಿ ಬರ್ಬರ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು..
ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ನಿಶ್ಚಿತ್‌ನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಗಳಾಗಿ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದಾಗ, ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್ಐ ಅರವಿಂದ್ ಕುಮಾರ್ ಅವರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.ಘಟನೆಯಲ್ಲಿ ಗುರುಮೂರ್ತಿಯ ಎರಡೂ ಕಾಲುಗಳು ಮತ್ತು ಗೋಪಾಲಕೃಷ್ಣನ ಒಂದು ಕಾಲಿಗೆ ಗುಂಡು ತಗುಲಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಬೆಂಗಳೂರು ಅರಕೆರೆಯ ಶಾಂತಿನಿಕೇತನ ಲೇಔಟ್‌ನಲ್ಲಿ ನಿಶ್ಚಿತ್ ಮತ್ತು ಅವನ ಪೋಷಕರು ವಾಸಿಸುತ್ತಿದ್ದರು. ನಿಶ್ಚಿತ್‌ನ ತಂದೆ ನಗರದ ಪ್ರತಿಷ್ಠಿತ…
ಮುಂದೆ ಓದಿ..
