ಜೀವನಮಟ್ಟ ಸುಧಾರಣೆಯ ಆಯ್ಕೆಗಳು…..
ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾರ್ಯವಾಗಿ ಸಹಜವಾಗಿಯೇ, ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಇವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿರುವುದು ನಮ್ಮ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟಿದ್ದು. ಕೆಲವು ಉದಾಹರಣೆಗಳೆಂದರೆ……… ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ.ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ.ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ.ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ.ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ,ದೇವ ಮಂದಿರ, ಚರ್ಚು, ಮಸೀದಿ, ಮಠ…
ಮುಂದೆ ಓದಿ..
