ದೇವನಹಳ್ಳಿ ರೈತರ ಹೋರಾಟ……. ದೇವನಹಳ್ಳಿ ಭೂ ಸ್ವಾಧೀನ ವಿರುದ್ಧದ ರೈತ ಹೋರಾಟ ಸ್ವಲ್ಪಮಟ್ಟಿಗೆ ಯಶಸ್ವಿಯಾಗುತ್ತಿರುವ ಸಂದರ್ಭದಲ್ಲಿ ನೆನಪಾಗುತ್ತಿರುವ ರೈತರ ಆ ದಿನಗಳು…….
ತುಂಬಾ ಹಿಂದೆ ಏನು ಅಲ್ಲ, ಕೇವಲ 25/30 ವರ್ಷಗಳ ಹಿಂದೆ ಜಾಗತೀಕರಣದ ಪರಿಣಾಮವಾಗಿ ಮುಕ್ತ ಮಾರುಕಟ್ಟೆಗೆ ಭಾರತ ಸಹಿ ಹಾಕಿದ ನಂತರ ಅಭಿವೃದ್ಧಿ ಎಂಬ ಮಾನದಂಡವೇ ಬದಲಾಯಿತು. ಆಗಿನ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರ ಬಾಬು ನಾಯ್ಡು, ಕರ್ನಾಟಕದ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಸ್ವಲ್ಪಮಟ್ಟಿಗೆ ರಾಜಾಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅದೇ ಹಾದಿಯಲ್ಲಿ ಆಗ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ಬಂಡವಾಳ ಹೂಡಿಕೆದಾರರಿಗೆ ರತ್ನಗಂಬಳಿ ಹಾಸಿ ಸ್ವಾಗತ ಕೋರಿದರು. ಬಹುತೇಕ ಅವರು ಕೇಳಿದ ಎಲ್ಲಾ ಸೌಕರ್ಯಗಳನ್ನು ಸರ್ಕಾರವೇ ಅವರಿಗೆ ಶರಣಾದಂತೆ ಒದಗಿಸಿದರು. ಮುಖ್ಯವಾಗಿ ಯಥೇಚ್ಛವಾಗಿ ಭೂಮಿಯನ್ನು ಧಾರೆಯೆರೆದು ಕೊಡಲಾಯಿತು. ಜೊತೆಗೆ ವಿಶೇಷ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳನ್ನು ಸ್ಥಾಪಿಸಲಾಯಿತು. ಅದಕ್ಕಾಗಿ ಕೃಷಿ, ಅರಣ್ಯ, ಖಾಸಗಿ ಮುಂತಾದ ಅನೇಕ ಉಪಯುಕ್ತ ಜಮೀನುಗಳನ್ನು ಹಿಂದೆ ಮುಂದೆ ನೋಡದೆ ನೀಡಲಾಯಿತು. ಉದ್ಯೋಗ ಸೃಷ್ಟಿಯಾಗುತ್ತದೆ, ಜಿಡಿಪಿಗೆ ಬಹುದೊಡ್ಡ ಕೊಡುಗೆಯಾಗುತ್ತದೆ, ಸರ್ಕಾರಿ…
ಮುಂದೆ ಓದಿ..
