ರಾತ್ರಿ ಪಾಳಿ ( Night shift ) ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ………
ರಾತ್ರಿ ಪಾಳಿ ( ನೈಟ್ ಶಿಫ್ಟ್ ) ಎಂಬ ಉದ್ಯೋಗಿಗಳ ಕೆಲಸದ ಅವಧಿಯು ಒಂದು ಯುವ ಪೀಳಿಗೆಯನ್ನೇ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳಿಗೆ ಸಿಲುಕಿಸಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತುಂಬಾ ದುಷ್ಪರಿಣಾಮವನ್ನು ಬೀರುತ್ತಿದೆ. ನನಗೆ ಪರಿಚಯದ ಎಲ್ಲಾ ಕ್ಷೇತ್ರಗಳ ಕಂಪನಿ, ಕಾರ್ಖಾನೆ, ಇತ್ಯಾದಿಗಳಲ್ಲಿ ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುವ ಉದ್ಯೋಗಿಗಳನ್ನು, ಆತ್ಮೀಯರನ್ನು ಮಾತನಾಡಿಸಿದೆ. ಅವರೆಲ್ಲರ ಅನಿಸಿಕೆ, ಅಭಿಪ್ರಾಯವೇನೆಂದರೆ ರಾತ್ರಿ ಪಾಳಿಯಲ್ಲಿ ಖಂಡಿತವಾಗಲೂ ನಿದ್ರಾಹೀನತೆಯಿಂದ ಕೆಲವಷ್ಟು ಸಾಮಾನ್ಯ ಮತ್ತು ದೀರ್ಘ ಖಾಯಿಲೆಗಳು ನಮ್ಮನ್ನು ಬಾಧಿಸುತ್ತಿವೆ. ಕೆಲವರಂತೂ ರಾತ್ರಿ ಪಾಳಯ ಒಂದು ದುಃಸ್ವಪ್ನ. ಅದರಿಂದಾಗಿ ನಾನು ಖಿನ್ನತೆಗೆ ಒಳಗಾಗಿ ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದರು. ಹಲವರು ಕೌಟುಂಬಿಕ ಸಮಸ್ಯೆಗೂ ಇದು ಕಾರಣವಾಗಿದೆ ಎಂದು ಹೇಳಿದರು. ಕೆಲವು ಕ್ಷೇತ್ರಗಳಲ್ಲಿ ರಾತ್ರಿ ಪಾಳಿಯು ಅನಿವಾರ್ಯವೇನೋ ನಿಜ. ಆದರೆ ಅದಕ್ಕೆ ಕೆಲವೊಂದು ಪರಿಹಾರ ರೂಪದ ಬದಲಾವಣೆಯು ತೀರ ಅಗತ್ಯವಾಗಿದೆ. ಇದು ಅತಿಯಾಗಿ ದೇಹ ಮತ್ತು…
ಮುಂದೆ ಓದಿ..
