ಬೆಳಗಿನ ವಾಯುವಿಹಾರದಲ್ಲಿ ಕಂಡದ್ದು……..
ಬೆಳಗಿನ ವಾಯುವಿಹಾರದಲ್ಲಿ ಕಂಡದ್ದು…….. ಎಂದಿನಂತೆ ಬೆಳಗಿನ 4 ಗಂಟೆಗೆ ಎದ್ದವನು ಅಂದಿನ ಬರಹಗಳನ್ನು ಬರೆದು Post ಮಾಡಿ 5/30 ಕ್ಕೆ ಸರಿಯಾಗಿ ಮನೆಯಿಂದ ಹೊರಟೆ….. ತುಂತುರು ಹನಿಗಳ ನಡುವೆ ತೂರಿಬಂದ ತಣ್ಣನೆಯ ಗಾಳಿ ಮೈಸೋಕಿಸಿ ರೋಮಾಂಚನ ಉಂಟುಮಾಡಿತು. ಆಹ್ಲಾದಕರ ವಾತಾವರಣ ಗಿಡಮರಗಳ ನಡುವಿನಿಂದ ತೂರಿಬಂದ ಪಕ್ಷಿಗಳ ಕಲರವ – ಮಂದಿರದಿಂದ ಭಕ್ತಿಗೀತೆ ಮಸೀದಿಯಿಂದ ನಮಾಜು, ಚರ್ಚಿನಿಂದ ಪ್ರಾರ್ಥನೆ ಮೂಡಿ ಬರುತ್ತಿದ್ದು ಸಂಗೀತದ ರಸಾನುಭವ ಮುದನೀಡಿತು……… ಬೆಳಗ್ಗೆ ಸೇವಿಸಿದ್ದ ಅಸ್ಸಾಂನ ರುಚಿ ರುಚಿಯಾದ ಮಸಾಲಾ ಟೀ ಸ್ವಾದ ಗಂಟಲಿನಿಂದ ಕೆಳಗಿಳಿದು ದೇಹ ಬೆಚ್ಚಗಾಗಿಸಿ ಸಂಭ್ರಮಿಸಿತು… ಹಾಗೇ ಸ್ವಲ್ಪ ದೂರ ನಡೆಯುತ್ತಿದ್ದಂತೆ ಒಂದು ರಸ್ತೆಯ ಬದಿಯಲ್ಲಿ ಸುಮಾರು 10/12 ವರ್ಷದ ಆಸುಪಾಸಿನ ಒಂದಷ್ಟು ಮಕ್ಕಳು ನಡುಗುವ ಚಳಿಯಲ್ಲೂ ಆ ದಿನದ ಪತ್ರಿಕೆಗಳನ್ನು ವಿಂಗಡಿಸಿ ಸೈಕಲ್ ಗೆ ಕಟ್ಟಿ ಗಡಿಬಿಡಿಯಲ್ಲಿ ಹೊರಡುವ ಆತುರದಲ್ಲಿದ್ದರು. ಅವರಿಗೆ ಸಿಗುವ ಸಂಬಳ ತಿಂಗಳಿಗೆ 500/1000 ಇರಬಹುದಷ್ಟೇ.ಎಷ್ಟೋ…
ಮುಂದೆ ಓದಿ..
