ತಿನ್ನುವ ಹಕ್ಕಿದೆ,ಬಿಸಾಡುವ ಹಕ್ಕಿಲ್ಲ…….
ತಿನ್ನುವ ಹಕ್ಕಿದೆ,ಬಿಸಾಡುವ ಹಕ್ಕಿಲ್ಲ……. ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಎರಡು ವರ್ಷಗಳ ಹಿಂದೆ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and agriculture organization ( FAO ) ಸ್ಥಾಪಿಸಿದ ದಿನವನ್ನು ಪ್ರತಿವರ್ಷ ವಿಶ್ವ ಆಹಾರ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಹಸಿವಿನಿಂದ ಸಾಯುವವರ ಸಂಖ್ಯೆ ಎಷ್ಟು ಎಂದು ನಿರ್ದಿಷ್ಟವಾಗಿ ತಿಳಿದಿಲ್ಲ. ಆದರೆ ಲಕ್ಷಾಂತರ ಜನ ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ ಎಂದು ಅಧ್ಯಯನವೊಂದು ವರದಿ ಮಾಡಿದೆ. ಇತ್ತೀಚಿನ ಒಂದು ವರದಿಯ ಪ್ರಕಾರ ಭಾರತದ ಹಸಿವಿನ ಸೂಚ್ಯಂಕ 111 ಸ್ಥಾನಕ್ಕೆ…
ಮುಂದೆ ಓದಿ..
