ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ: ಪಾರದರ್ಶಕ ಆಡಳಿತದತ್ತ ಹೆಜ್ಜೆ
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ: ಪಾರದರ್ಶಕ ಆಡಳಿತದತ್ತ ಹೆಜ್ಜೆ ಗ್ರಾಮೀಣ ಆಡಳಿತವನ್ನು ಡಿಜಿಟಲ್ಗೊಳಿಸುವ ಮಹತ್ತರ ಹೆಜ್ಜೆಯಾಗಿ ರಾಜ್ಯ ಸರ್ಕಾರ “ಇ-ಸ್ವತ್ತು” ಯೋಜನೆಗೆ ಅಧಿಕೃತ ಚಾಲನೆ ನೀಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತಂದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆ ಜಾರಿಯಾಗಿದೆ. ಹೊಸ ನಿಯಮಾವಳಿಗಳ ಪ್ರಕಾರ, ನಿರಾಕ್ಷೇಪಣ ಪತ್ರ (NOC), ಪರವಾನಗಿ, ತೆರಿಗೆ ಹಾಗೂ ಶುಲ್ಕಗಳ ನಿಗದಿಯನ್ನು ವೈಜ್ಞಾನಿಕ ರೀತಿಯಲ್ಲಿ ನಿಗದಿಪಡಿಸಲಾಗಿದ್ದು, ರಾಜ್ಯದ 95.75 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ “ಇ-ಸ್ವತ್ತು” ಪ್ರಮಾಣಪತ್ರ ನೀಡುವ ದಾರಿಯನ್ನು ಸರ್ಕಾರ ತೆರೆದಿದೆ. ಹೊಸ ತಂತ್ರಾಂಶದ ಅಭಿವೃದ್ಧಿಯು ಹದಿನೈದು ದಿನಗಳೊಳಗೆ ಪೂರ್ಣಗೊಳ್ಳಲಿದ್ದು, ಗ್ರಾಮೀಣ ನಾಗರಿಕರು ನೇರವಾಗಿ ಆನ್ಲೈನ್ ಮೂಲಕ ಈ ಸೇವೆಯನ್ನು ಪಡೆಯಲು ಸಾಧ್ಯವಾಗಲಿದೆ. ತೆರಿಗೆ ಲೆಕ್ಕಾಚಾರ ವಿಧಾನವನ್ನು ಸರಳಗೊಳಿಸಿರುವ ಸರ್ಕಾರ, ಇ-ಸ್ವತ್ತು ನಮೂನೆ ವಿತರಣೆ ಅವಧಿಯನ್ನು…
ಮುಂದೆ ಓದಿ..
