ಪ್ರಜಾಪ್ರಭುತ್ವ — ಸ್ವಾತಂತ್ರ್ಯ – ಸ್ವೇಚ್ಛೆ – ಗುಲಾಮಿತನ……..
ಪ್ರಜಾಪ್ರಭುತ್ವ — ಸ್ವಾತಂತ್ರ್ಯ – ಸ್ವೇಚ್ಛೆ – ಗುಲಾಮಿತನ…….. ಈ ಪದಗಳ ನಿಜವಾದ ಅರ್ಥವನ್ನು, ಆಶಯವನ್ನು ಗ್ರಹಿಸಲು ಓದು, ಅಧ್ಯಯನ, ಚಿಂತನೆ, ಅನುಭವ, ಅನುಭಾವ, ಸಂವೇದನಾಶೀಲತೆ, ಕ್ರಿಯಾಶೀಲತೆ, ವಿಶಾಲತೆ, ಒಳ್ಳೆಯತನ, ಭೌಗೋಳಿಕ, ಕಾನೂನಾತ್ಮಕ ಮತ್ತು ಪ್ರಾಕೃತಿಕ ಮೌಲ್ಯಗಳ ಜ್ಞಾನ ಇರಬೇಕಾಗುತ್ತದೆ. ಇಲ್ಲದಿದ್ದರೆ ಎಲ್ಲವೂ ಒಂದು ಹುಚ್ಚರ ಸಂತೆಯಂತೆ ಭಾಸವಾಗುತ್ತದೆ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಕ್ರಾಂತಿಯಿಂದ ಇವುಗಳ ನಡುವಿನ ವ್ಯತ್ಯಾಸವನ್ನು ಗ್ರಹಿಸುವಲ್ಲಿ ನಾವು ವಿಫಲರಾಗುತ್ತಿದ್ದೇವೆ ಎನಿಸುತ್ತದೆ. ಈ ವಿಫಲತೆಯನ್ನು ರಾಜಕಾರಣಿಗಳು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಕುಳಗಳು ಬಹಳ ಯಶಸ್ವಿಯಾಗಿ ಉಪಯೋಗಿಸಿಕೊಂಡು ಜನರನ್ನು ನೇರ ನಿಯಂತ್ರಣಕ್ಕೆ ಒಳಪಡಿಸಿಕೊಂಡಿದೆ. ಒಂದು ರೀತಿ ಶ್ವಾನಗಳಿಗೆ ಬಿಸ್ಕೆಟ್ ಹಾಕುವಂತೆ ಜನರ ಮನೋಭಾವವನ್ನೇ ದಿವಾಳಿತನದತ್ತ ದೂಡಿ ಜೀತದಾಳುಗಳಂತೆ ಉಪಯೋಗಿಸಿಕೊಳ್ಳುತ್ತಿದೆ. ತಿನ್ನುವುದಕ್ಕಾಗಿ ಬದುಕಬೇಕೋ, ಬದುಕುವುದಕ್ಕಾಗಿ ತಿನ್ನಬೇಕೋ ಎಂಬ ಗೊಂದಲ ಸೃಷ್ಟಿ ಮಾಡಿದೆ. ಆದರೆ ತಿನ್ನುವುದಕ್ಕೂ, ಬದುಕುವುದಕ್ಕೂ ಜೀವನ ಪರ್ಯಂತ ದುಡಿಯಲೇ ಬೇಕಾದ ಅನಿವಾರ್ಯತೆಯಂತು ಸೃಷ್ಟಿಯಾಗಿದೆ. ಬಹುತೇಕ…
ಮುಂದೆ ಓದಿ..
