ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…….. ( ಆಗಸ್ಟ್ 7 )
ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…….. ( ಆಗಸ್ಟ್ 7 ) ಅಷ್ಟು ಸುಲಭವಲ್ಲ ಪ್ರೀತಿಗೆ ಪ್ರತಿ ವಂದನೆ ಹೇಳುವುದು……… ಯಾರಾದರೂ ನಮ್ಮನ್ನು ಟೀಕಿಸಿದರೆ, ನಿಂದಿಸಿದರೆ, ಹೊಡೆದರೆ ನಾವು ಅದಕ್ಕೆ ಒಂದಷ್ಟು ನಮ್ಮ ಮಿತಿಯಲ್ಲಿ ಅದೇ ರೀತಿ ಪ್ರತಿಕ್ರಿಯಿಸಬಹುದು ಅಥವಾ ನಿರ್ಲಕ್ಷಿಸಬಹುದು. ಆದರೆ ಪ್ರೀತಿ ಅಭಿಮಾನದ ನುಡಿಗಳಿಗೆ ಪ್ರತಿ ವಂದನೆ ತುಂಬಾ ಕಷ್ಟ. ಅಕ್ಷರಗಳಿಗೆ ನಿಲುಕದ ಭಾವವದು. ಮಾನವೀಯ ಮೌಲ್ಯಗಳ ಪುನರುತ್ಥಾನದ ಕನಸಿನ ಯಾತ್ರೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಾರಂಭಿಸಿ ಮುಂದೆ ಅದರ ಸಹಾಯದಿಂದಲೇ ರಾಜ್ಯಾದ್ಯಂತ ಪಾದಯಾತ್ರೆ ಮಾಡಿ ಈಗಲೂ ಓದು ಬರಹ ಮತ್ತು ಕಾರ್ಯಕ್ರಮಗಳ ಮೂಲಕ ಒಂದಷ್ಟು ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕೆ ಸಿಗುತ್ತಿರುವ ಸ್ಪಂದನೆಗೆ ಸಾಕ್ಷಿಯಾಗಿ ಜನ್ಮದಿನದ ನೆನಪಿನಲ್ಲಿ ನೀವುಗಳು ಶುಭ ಕೋರಿರುವುದು ನನಗೆ ತಲುಪಿದೆ. ಇಂದಿನ ಆಧುನಿಕ ಸಮಾಜದಲ್ಲಿ ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ಪ್ರಾಮಾಣಿಕತೆಯನ್ನು ಉಳಿಸಿಕೊಳ್ಳುವುದೇ ಒಂದು ಸವಾಲು. ವಿಚಿತ್ರವೆಂದರೆ, ಆತ್ಮ…
ಮುಂದೆ ಓದಿ..
