ಅಲ್ಲಮ – ಅಕ್ಕಮಹಾದೇವಿಯವರ ಜೀವನೋತ್ಸಾಹ ತುಂಬುವ ವಚನದ ಸಾಲುಗಳು……
ಇದು ಪ್ರೀತಿಯ ಮಾಯೆಯೊಳಗೆ ಸಿಲುಕಿ, ಕಾಮದ ಬಲೆಯೊಳಗೆ ಬಂಧಿಯಾಗಿ, ಅಜ್ಞಾನದ ಮೋಹ ಪಾಶದಲ್ಲಿ ಒದ್ದಾಡಿ, ಹಣದ ದಾಹದಲ್ಲಿ ಮೈಮರೆತು ಅದರಿಂದ ಹೊರಬಂದ ವ್ಯಕ್ತಿಯೊಬ್ಬನ ಸ್ವಗತ…..)ಶಬ್ದವೆಂಬನೆ ಶೋತ್ರದೆಂಜಲು, ಸ್ಪರ್ಶವೆಂಬೆನೆ ತೊಕ್ಕಿ ನೆಂಜಲು, ರೂಪವೆಂಬನೆ ನೇತ್ರದೆಂಜಲು, ಪರಿಮಳವೆಂಬನೆ ಘ್ರಾಣದೆಂಜಲು, ರುಚಿಯೆಂಬೆನೆ ಜಿಹ್ವೆ ಎಂಜಲು, ನಾನೆಂಬೆನೆ ಅರಿವಿನೆಂಜಲು, ಎಂಜಲೆಂಬ ಬಿನ್ನವಳಿದ ಬೆಳಗಿನೊಳಗಣ ಬೆಳಗು, ಗುಹೇಶ್ವರ ಲಿಂಗವು……. ಅಲ್ಲಮಪ್ರಭು,ಸತ್ಯವೂ ಇಲ್ಲ ಅಸತ್ಯವೂ ಇಲ್ಲ, ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನು ಇಲ್ಲ ನೀನು ಇಲ್ಲ, ಇಲ್ಲ ಇಲ್ಲ ಎಂಬುದು ತಾನಿಲ್ಲ, ಗುಹೇಶ್ವರ ಲಿಂಗತಾ ಬಯಲು….ಅಲ್ಲಮಪ್ರಭು,ಹಸಿವಾದೊಡೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳ ಭಾವಿಗಳುಂಟು, ಶಯನಕ್ಕೆ ಹಾಳು ದೇಗುಲಗಳುಂಟು, ಚೆನ್ನಮಲ್ಲಿಕಾರ್ಜುನಯ್ಯ ಆತ್ಮ ಸಂಗಾತಕ್ಕೆ ನೀನೆನಗುಂಟು… – ಅಕ್ಕ ಮಹಾದೇವಿ,ಆಳ ಪ್ರೀತಿಯಲ್ಲಿ ಸಿಲುಕಿ ಅದರಿಂದ ವಂಚನೆಗೊಳಗಾಗಿ ವಿರಹಿಯಾದ ವ್ಯಕ್ತಿಗಳು ಹುಚ್ಚರಾಗುತ್ತಾರೆ ಅಥವಾ ವ್ಯಸನಿಗಳಾಗುತ್ತಾರೆ ಅಥವಾ ತತ್ವಜ್ಞಾನಿಗಳಾಗುತ್ತಾರೆ ಎಂಬ ಮಾತಿದೆ…..ಇಲ್ಲಿನ ವ್ಯಕ್ತಿಯು ತತ್ವಜ್ಞಾನಿಯಾಗುವ ಹಾದಿಯಲ್ಲಿದ್ದಾನೆ ಎನಿಸುತ್ತದೆ……ಪ್ರೀತಿಯ ಆಳದಲ್ಲಿ ಅರಳುವ…
ಮುಂದೆ ಓದಿ..
