ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ………
Taluknewsmedia.comಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು………. ಹೃದಯದ ಸ್ನೇಹಿತ ಗಣೇಶ, ಹೇಗಿದ್ದೀಯಾ ?ನಿನ್ನ ಹೊಟ್ಟೆ ನೋಡಿದರೆ ತುಂಬಾ ಆರಾಮವಾಗಿ ಇರಲೇಬೇಕು ಅನಿಸುತ್ತಿದೆ. ನಿನಗೇನು ಕಡಿಮೆ ಗೆಳೆಯ,100 ಕೋಟಿಗೂ ಹೆಚ್ಚು ಜನ ಪ್ರತಿನಿತ್ಯ ಭಕ್ಷ್ಯಬೋಜನಗಳನ್ನು ಉಣಬಡಿಸುತ್ತಾರೆ. ವರ್ಷಕ್ಕೊಮ್ಮೆ ನಿನ್ನನ್ನು ಹಾಡಿ ಹೊಗಳಿ ಬೀದಿಬೀದಿಗಳಲ್ಲಿ ಕುಣಿದು ಕುಪ್ಪಳಿಸುತ್ತಾರೆ.ನೀನು ಅದರಲ್ಲಿ ಮೈಮರೆತು ನಮ್ಮನ್ನು ಮರೆತಿರಬಹುದು. ಅದನ್ನು ನೆನಪಿಸುವ ಸಲುವಾಗಿಯೇ ಮತ್ತು ಇಲ್ಲಿನ ನಿಜ ಸ್ಥಿತಿ ನಿನಗೆ ತಿಳಿಸಲು ಈ ಪತ್ರ ಬರೆಯುತ್ತಿದ್ದೇನೆ. ಗೆಳೆಯ,ನಮ್ಮ ಜನ ನಿನ್ನನ್ನು ತುಂಬಾ ಪ್ರೀತಿಸುತ್ತಾರೆ. ನಿನ್ನನ್ನು ಕಂಡರೆ ಅವರಿಗೆ ಅಪಾರ ಅಭಿಮಾನ – ಬಹಳ ಭಕ್ತಿ. ನಮ್ಮ ಗಣೇಶ ನಮ್ಮೆಲ್ಲಾ ಕಷ್ಟ ಪರಿಹರಿಸುವ ವಿಘ್ನ ವಿನಾಯಕ ಎಂದು ನಂಬಿದ್ದಾರೆ.ಅನೇಕ ಹೆಸರುಗಳಿಂದ ನಿನ್ನನ್ನು ಕರೆಯುತ್ತಾರೆ. ಎಲ್ಲಾ ಶುಭ ಕಾರ್ಯಗಳಲ್ಲಿ ನಿನಗೇ ಅಗ್ರ ಪೂಜೆ. ಒಂಥರಾ ಎಲ್ಲರಿಗೂ ನೀನೇ ಬಾಸ್. ಆದರೆ ಗೆಳೆಯ,ನನ್ನ…
ಮುಂದೆ ಓದಿ..
