ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ……..
Taluknewsmedia.comತಾಯ್ನೆಲ……. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ…….. 78 ರ ಯೌವ್ವನದ ಸೃಷ್ಟಿಯ ಅತ್ಯದ್ಭುತ, ಅತ್ಯಾಕರ್ಷಕ ಭರತ ಖಂಡವೇ,……. ನಿನ್ನೊಂದಿಗೆ ಈ ಕ್ಷಣ ನಾನಿರುವುದೇ ಒಂದು ಸೌಭಾಗ್ಯ.ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಾ….. ಸ್ವಾತಂತ್ರ್ಯ ಪಡೆದ 78 ವರ್ಷಗಳು …… ಸಂವಿಧಾನ ಸ್ವೀಕರಿಸಿ 75 ವರ್ಷಗಳು…… ಆದರೆ,ನಿನ್ನ ಅಸ್ತಿತ್ವ ಸಹಸ್ರಾರು ವರ್ಷಗಳ ನಿರಂತರ ಚಲನೆಯಿಂದ ಕೂಡಿದೆ…… ನನ್ನ ಭರತ ಖಂಡವೇ ಏನೆಂದು ವರ್ಣಿಸಲಿ – ಎಷ್ಟೆಂದು ವರ್ಣಿಸಲಿ ನಿನ್ನನ್ನು …… ಪದಗಳು – ಭಾವಗಳು – ಕಲ್ಪನೆಗಳಿಗೂ ನಿಲುಕದ ನಿನ್ನನ್ನು ಹೇಗೆಂದು ಹಿಡಿದಿಡಲಿ ಈ ಪುಟ್ಟ ಹೃದಯದಲಿ…. ರಾಮಾಯಣ – ಮಹಾಭಾರತ – ಭಗವದ್ಗೀತೆಗಳೆಂಬ – ಅಸಾಮಾನ್ಯ ಬೃಹತ್ ಗ್ರಂಥಗಳು ನಿನ್ನಲ್ಲೇ ಸೃಷ್ಟಿಯಾದವು…….. ಗೌತಮ ಬುದ್ಧ – ಮಹಾವೀರರೆಂಬ ಚಿಂತನ ಚಿಲುಮೆಗಳಿಗೆ ಜನ್ಮ ನೀಡಿದ್ದು ನೀನೇ……. ಹಿಮಗಿರಿಯ ಸೌಂದರ್ಯ – ನಿತ್ಯ ಹರಿದ್ವರ್ಣದ ಕಾಡುಗಳು – ತುಂಬಿ ತುಳುಕುವ ನದಿಗಳು…
ಮುಂದೆ ಓದಿ..
