ಪತ್ನಿ ಕೊಲೆ ಪ್ರಕರಣ – ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿಯ ಕೃತ್ಯ ಬಯಲು!
Taluknewsmedia.comಪತ್ನಿ ಕೊಲೆ ಪ್ರಕರಣ – ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತಿಯ ಕೃತ್ಯ ಬಯಲು! ಬೆಂಗಳೂರು ನಗರದ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ಕೃತ್ಯ ಮರೆಮಾಚಲು “ವಿದ್ಯುತ್ ಶಾಕ್‌ನಿಂದ ಸಾವು” ಎಂದು ನಾಟಕವಾಡಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳು ರೇಷ್ಮಾ (32), ಆರೋಪಿ ಪತಿ ಪ್ರಶಾಂತ್ ಕಮ್ಮಾರ್ (25) ಎಂಬಾತ. ರೇಷ್ಮಾ ಸಹೋದರಿ ರೇಣುಕಾ ನೀಡಿದ ದೂರಿನ ಮೇರೆಗೆ ಹೆಬ್ಬಗೋಡಿ ಪೊಲೀಸರು ಹತ್ಯೆ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸುತ್ತಿದ್ದಾರೆ. ಮರಗೊಂಡಹಳ್ಳಿ ನಿವಾಸಿ ರೇಷ್ಮಾ ಅವರು 15 ವರ್ಷಗಳ ಹಿಂದೆ ಸುರೇಂದ್ರ ಎಂಬುವರನ್ನು ವಿವಾಹವಾಗಿದ್ದರು. ಆದರೆ ಮೊದಲ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇವರಿಗೆ 15 ವರ್ಷದ ಮಗಳು ಇದ್ದಾಳೆ. ಬಳಿಕ 9 ತಿಂಗಳ ಹಿಂದೆ ಇನ್‌ಸ್ಟಾಗ್ರಾಂ ಮೂಲಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಮೂಲದ ಪ್ರಶಾಂತ್ ಕಮ್ಮಾರ್ ಎಂಬಾತನ ಪರಿಚಯವಾಗಿ, ಇಬ್ಬರು ಪ್ರೀತಿಯಲ್ಲಿ ಬಿದ್ದು…
ಮುಂದೆ ಓದಿ..
