ಮರ ಮತ್ತು ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವವರ ವಿರುದ್ಧ ಕಠಿಣ ಕ್ರಮ: ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಎಚ್ಚರಿಕೆ
Taluknewsmedia.comಮರ ಮತ್ತು ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವವರ ವಿರುದ್ಧ ಕಠಿಣ ಕ್ರಮ: ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಎಚ್ಚರಿಕೆ ಬೆಂಗಳೂರು: ನಗರದ ಸೌಂದರ್ಯ ಹಾಳುಮಾಡುವ ರೀತಿಯಲ್ಲಿ ಮರಗಳು ಮತ್ತು ಸಾರ್ವಜನಿಕ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಅವರು ಬೆಂಗಳೂರು ಪೂರ್ವ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ದೇವರಬೀಸನಹಳ್ಳಿ ಪ್ರದೇಶದಲ್ಲಿ ಮರಗಳ ಮೇಲಿನ ಪೋಸ್ಟರ್ಗಳನ್ನು ಗಮನಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಈ ಸಂಬಂಧ ಅಧಿಕಾರಿಗಳಿಗೆ ತಕ್ಷಣವೇ ಅಸ್ತಿತ್ವದಲ್ಲಿರುವ ಎಲ್ಲಾ ಪೋಸ್ಟರ್ಗಳನ್ನು ತೆರವುಗೊಳಿಸಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಕಾರ್ಯಗಳು ಮರುಕಳಿಸಿದರೆ ಸಂಬಂಧಿಸಿದವರಿಗೆ ದಂಡ ವಿಧಿಸಲು ಸೂಚನೆ ನೀಡಿದರು. ಪರಿಶೀಲನೆಯ…
ಮುಂದೆ ಓದಿ..
