ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿಯಿಂದ ಉಂಟಾಗಬಹುದಾದ ಗಾಯ, ಹಾನಿಗಳಿಗೆ ಚಿಕಿತ್ಸೆ ನೀಡಲು ದಿನದ 24 ಗಂಟೆಯೂ ಸೇವೆ ನೀಡಲು ಬೆಂಗಳೂರು ನಗರದ ಮಿಂಟೋ ಕಣ್ಣಿನ ಆಸ್ಪತ್ರೆ ಸಜ್ಜಾಗಿದೆ
Taluknewsmedia.comದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿಯಿಂದ ಉಂಟಾಗಬಹುದಾದ ಗಾಯ, ಹಾನಿಗಳಿಗೆ ಚಿಕಿತ್ಸೆ ನೀಡಲು ದಿನದ 24 ಗಂಟೆಯೂ ಸೇವೆ ನೀಡಲು ಬೆಂಗಳೂರು ನಗರದ ಮಿಂಟೋ ಕಣ್ಣಿನ ಆಸ್ಪತ್ರೆ ಸಜ್ಜಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಸ್ಪತ್ರೆಯ ಪ್ರಭಾರ ನಿರ್ದೇಶಕ ಡಾ.ಶಶಿಧರ್, ದೀಪಾವಳಿ ಪಟಾಕಿ ಸಿಡಿತದಿಂದ ಉಂಟಾಗುವ ಗಾಯಗಳಿಗೆ ಚಿಕಿತ್ಸೆ ನೀಡುವುದಕ್ಕಿಂತ ಮೊದಲು ಗಾಯ ಆಗದಂತೆ ತಡೆಗಟ್ಟಲು ಮನೆಗಳಲ್ಲಿ ಎಚ್ಚರವಹಿಸಬೇಕು. ಇದರ ಹೊರತಾಗಿಯೂ ಗಾಯ ಅಥವಾ ಅನಾಹುತಗಳು ನಡೆದರೆ ಆಸ್ಪತ್ರೆಯಲ್ಲಿ ದಿನದ 24 ಗಂಟೆ ಸೇವೆ ನೀಡಲು 25 ಬೆಡ್ ವ್ಯವಸ್ಥೆ ಮಾಡಲಾಗಿದೆ. 10 ಮಹಿಳೆಯರ, 10 ಪುರುಷರ ಬೆಡ್ ಹಾಗೂ 5 ಮಕ್ಕಳ ಬೆಡ್ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ವೈದ್ಯಕೀಯ ಸೇವೆ ಲಭ್ಯವಿದ್ದು, ಆಸ್ಪತ್ರೆಗಳ ವೈದ್ಯರಿಗೆ ದೀಪಾವಳಿ ಹಬ್ಬಕ್ಕೆ ರಜೆ ರದ್ದು ಮಾಡಲಾಗಿದೆ. ಹೀಗಾಗಿ ಎಲ್ಲಾ ವೈದ್ಯಕೀಯ ಸಿಬ್ಬಂದಿ ಸೇವೆ ಲಭ್ಯವಿರಲಿದ್ದಾರೆ ಎಂದು ತಿಳಿಸಿದರು. ಮಿಂಟೋ ಆಸ್ಪತ್ರೆಯಲ್ಲಿ ಪ್ರತಿ…
ಮುಂದೆ ಓದಿ..
