೭೭ ರ ಹರೆಯದ ಕೂಲಿಕಾರ ಚೆನ್ನಪ್ಪನ ಸ್ವಗತ…..
Taluknewsmedia.comಇಂದಿಗೆ ಸರಿಯಾಗಿ ನಾನು ಕೂಲಿ ಕೆಲಸ ಮಾಡಲು ಆರಂಭಿಸಿ ೭೦ ವರ್ಷವಾಯಿತು.೭ ನೇ ವಯಸ್ಸಿನಲ್ಲಿ ಪ್ರಾರಂಭವಾದ ನನ್ನ ಕೂಲಿ ಕೆಲಸ ಈಗಿನ ನನ್ನ ೭೭ ನೆಯ ಈ ವಯಸ್ಸಿನಲ್ಲೂ ನಿರಂತರವಾಗಿ ನಡೆಯುತ್ತಿದೆ…………….ಕೂಲಿ ಎಂದರೆ ಪೇಟೆ ಅಂಗಡಿಗಳಲ್ಲಿ ತರಕಾರಿ ಮೂಟೆ ಹೊರುವುದು. ಲಾರಿಗಳಿಗೆ ಮೂಟೆ ತುಂಬುವುದು ಮತ್ತು ಇಳಿಸುವುದು.ಈಗಿನ ಯುವ ಜನಾಂಗಕ್ಕೆ ತುಂಬಾ ಆಶ್ಚರ್ಯವಾಗಬಹುದು ಅಥವಾ ಕೆಲವರು ನಂಬದೇ ಇರಬಹುದು. ಇಲ್ಲಿಯವರೆಗೂ ನಾನು ಒಮ್ಮೆಯೂ ಯಾವುದೇ ಗಾಯ ಅಥವಾ ಖಾಯಿಲೆಯಿಂದ ಆಸ್ಪತ್ರೆಗೆ ಹೋಗಿಲ್ಲ. ೬೫ ನೆಯ ವಯಸ್ಸಿನಲ್ಲಿ ಒಮ್ಮೆ ಹೊಟ್ಟೆ ನೋವು ಮತ್ತು ೭೩ ನೆಯ ವಯಸ್ಸಿನಲ್ಲಿ ಹಲ್ಲು ನೋವು ಬಂದಾಗ ಔಷಧಿ ಅಂಗಡಿಯಿಂದ ಎರಡೆರಡು ಮಾತ್ರೆ ತೆಗೆದುಕೊಂಡಿದ್ದು ಬಿಟ್ಟರೆ ಆಕಡೆ ತಲೆಯೇ ಹಾಕಿಲ್ಲ. ನನಗೆ ೬ ಜನ ಮಕ್ಕಳು. ೪ ಗಂಡು ೨ ಹೆಣ್ಣು. ಎಲ್ಲಾ ಹೆರಿಗೆಗಳು ಸಹಜವಾಗಿ ಮತ್ತು ಮನೆಯಲ್ಲಿಯೇ ಆಗಿದೆ.ಎರಡು ದಿನಕ್ಕೆ ಒಮ್ಮೆ ಹಲ್ಲುಜ್ಜುವ…
ಮುಂದೆ ಓದಿ..
