ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12..
Taluknewsmedia.comಹೊಟ್ಟೆ ಪಾಡಿನ ವೇಶ್ಯೆಯರ ನಂತರ ನನ್ನನ್ನು ಅತಿಹೆಚ್ಚು ಕಾಡುವುದು ಬಾಲ ಕಾರ್ಮಿಕರು. ಪುಟ್ಟ ಮಕ್ಕಳು ಆ ಎಳೆಯ ವಯಸ್ಸಿನಲ್ಲಿ ಅತ್ಯಂತ ಕಠಿಣ ಕೆಲಸಗಳನ್ನು ಮಾಡುವುದು ಮತ್ತು ಅದೇ ಸಮಯದಲ್ಲಿ ಕೆಲವು ಶ್ರೀಮಂತರ ಮಕ್ಕಳು ಮಾಡಬಾರದ ಮೋಜು ಮಸ್ತಿ ಮಾಡುವುದನ್ನು ನೋಡಲು ಹಿಂಸೆಯಾಗುತ್ತದೆ…..ನಾವೇ ಹುಟ್ಟಿಸಿದ ನಮ್ಮದೇ ಅತ್ಯಂತ ಮುದ್ದಾದ ಮಕ್ಕಳು ಹೊಟ್ಟೆ ಪಾಡಿಗಾಗಿ ಇನ್ನೊಬ್ಬರ ಬಳಿ ದೈನೇಸಿಯಾಗಿ ದುಡಿಯುವ ದೃಶ್ಯಗಳನ್ನು ಒಮ್ಮೆ ಸುಮ್ಮನೆ ಕಲ್ಪಿಸಿಕೊಳ್ಳಿ, ದು:ಖದ ಕಟ್ಟೆ ಒಡೆಯುತ್ತದೆ…….ಅಂತಹ ಒಂದು ನೈಜ ಘಟನೆ…..ಅದು ಮಧ್ಯಮ ವರ್ಗದವರೇ ಹೆಚ್ಚಾಗಿ ಹೋಗುವ ಆಂಧ್ರ ಶೈಲಿಯ ಊಟದ ಹೋಟೆಲ್. ಅಂದು ಶೂಟಿಂಗ್ ಕೆಲಸ ಮುಗಿಸಿ ಜೊತೆಗಾರರೊಂದಿಗೆ ರಾತ್ರಿ ೧೧ ಗಂಟೆಗೆ ಹೋಟೆಲ್ ಒಳಗೆ ಪ್ರವೇಶಿಸಿದೆ. ಮ್ಯಾನೇಜರ್ ನನಗೆ ಬಹಳ ಪರಿಚಯದವರು. ಹೋಟೆಲ್ ಮುಚ್ಚುವ ಸಮಯ ೧೦/೪೫ . ಆದರೂ ನಾನು ಒಳಗೆ ಹೋದೆ. ಕೇವಲ ಒಂದು ಕುಟುಂಬದವರು ಮಾತ್ರವೇ ಊಟ ಮುಗಿಸಿ ಬಿಲ್…
ಮುಂದೆ ಓದಿ..
