ಸುದ್ದಿ 

ಕುರುಬ ಸಮುದಾಯವನ್ನು ಪ.ಪಂಗಡಕ್ಕೆ ಸೇರಿಸಿ: ಶ್ರೀ ಈಶ್ವರನಂದ ಪುರಿ ಸ್ವಾಮೀಜಿ ಹಾಗೂ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಕ್ಕೊತ್ತಾಯ.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ತುಮಕೂರು: ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸುವಂತೆ ಕಾಗಿನೆಲೆಯಿಂದ ಆರಂಭವಾಗಿರುವ ಪಾದಯಾತ್ರೆ ಇಂದು ತುಮಕೂರನ್ನು ತಲುಪಿದೆ. ಇದೇ ಸಂದರ್ಭದಲ್ಲಿ ಜಾಗೃತಿ ಸಭೆಯಲ್ಲಿ ಮಾತನಾಡಿದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ ಇವತ್ತಿನ ದಿನಗಳಲ್ಲಿ ಕುರಿ ಕಾಯುವ ಜನ ಸಂಕಷ್ಟದಲ್ಲಿದ್ದಾರೆ, ಅವರಿಗೆ ವಸತಿ ಇಲ್ಲ, ಭೂಮಿಇಲ್ಲ ಇಷ್ಟೆಲ್ಲಾ ಸಮಸ್ಯೆ ಇರುವಂತಹ ಕುರುಬರನ್ನು ಅಭಿವೃದ್ಧಿ ಪಡಿಸಬೇಕೆಂದರೆ ಪರಿಶಿಷ್ಟ ಪಂಗಡಕ್ಕೆ ಸೇರಿಸುವುದೊಂದೆ ಪರಿಹಾರ ಎಂದು ತಿಳಿಸಿದರು. ನಾವು ಹೊಸದಾಗಿ ಮೀಸಲಾತಿಯನ್ನು ಕೇಳುತ್ತಿಲ್ಲ ಈಗಾಗಲೇ ಮೀಸಲಾತಿ ಇರುವ (4) ಬೀದರ್, ಗುಲ್ಬರ್ಗ, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳನ್ನು ಸೇರ್ಪಡೆ ಮಾಡಿಕೊಂಡಂತೆ ರಾಜ್ಯದ ಎಲ್ಲಾ ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಹಕ್ಕೊತ್ತಾಯ ನಮ್ಮದು ಎಂದು ಶ್ರೀಗಳು ತಿಳಿಸಿದರು. ಶ್ರೀ ನಿರಂಜನಾನಂದ ಸ್ವಾಮೀಜಿ ಮಾತನಾಡಿ ಎಸ್ ಟಿ ಹೋರಾಟ ಎನ್ನುವಂತಹದ್ದು ಯಾರ ವಿರುದ್ಧವೂ ಅಲ್ಲ, ಯಾರ ಪರವಾಗಿಯೂ ಅಲ್ಲ ಯಾರೋ…

Read More
ಸುದ್ದಿ 

ಬೈಲಹೊಂಗಲ : 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಧಕರಿಗೆ ಸನ್ಮಾನ.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. . ರಾಜ್ಯದ ಕಟ್ಟಕಡೆಯ ತಾಲೂಕು ಕಾಗವಾಡ.ಚಿಕ್ಕೋಡಿಯಿಂದ ನಾಲ್ಕೈದು ಕಿ.ಮೀ ಪ್ರಯಾಣಿಸಿದರೆ ಸಾಕು ಮಹಾರಾಷ್ಟ್ರ ಶುರುವಾಗುತ್ತೆ. ಇಂತಹ ಗ್ರಾಮದಲ್ಲಿ ಗಡಿ ಕನ್ನಡ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಕನ್ನಡದ ಮನಸ್ಸುಗಳಲ್ಲಿ ಕನ್ನಡದ ಪ್ರೀತಿ ಮೊಳಗಿಸಿ, ಕನ್ನಡ ಜಾತ್ರೆ ಮಾಡಿದ ಬೆಳಗಾವಿ ಜಿಲ್ಲಾಡಳಿತ. ಜಿಲ್ಲೆಯ ಗಡಿ ಭಾಗದಲ್ಲಿರುವ ಕಾಗವಾಡ ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು . ಇದು ಪಟ್ಟಣದ ಮಲ್ಲಿಕಾರ್ಜುನ ವಿದ್ಯಾಲಯ ಆವರಣದಲ್ಲಿ ಜ.30 ಹಾಗೂ 31ರಂದು ಜರಗಿದ್ದು . ಈ ಸಮ್ಮೇಳನಕ್ಕೆ‌ ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರನ್ನು ಸರ್ವಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಮಲ್ಲಿಕಾರ್ಜುನ ಗುರುದೇವಾಶ್ರಮದ ಬಸವಲಿಂಗ ಸ್ವಾಮೀಜಿ, ಮಹಾಂತ ದುರದುಂಡೀಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ, ಮಲ್ಲಿಕಾರ್ಜುನ ಗುರುದೇವಾಶ್ರಮದ ಯತೀಶ್ವರಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಎರಡನೇ ದಿನವಾದ ಇಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ…

Read More

ಬಳ್ಳಾರಿ : ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಮಂಜಮ್ಮ ಜೋಗುತಿ.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಮಂಜಮ್ಮ ಜೋಗತಿಜಾನಪದ ಕಲಾವಿದ ಬಿ. ಮಂಜಮ್ಮ ಜೋಗತಿ ಭಾರತೀಯ ಲಿಂಗಾಯತ ಜಾನಪದ ಕಲಾವಿದರಾಗಿದ್ದಾರೆ. ಗ್ರಾಮೀಣ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಅಭ್ಯಾಸ ಮಾಡುವ ಜೋಗತಿ ನೃತ್ಯ (ಮಹಿಳೆಯರ ಗುಂಪು, ಸಾಮಾನ್ಯವಾಗಿ ವ್ಯಾಪಾರಸ್ಥರು ಪ್ರದರ್ಶಿಸುವ ಒಂದು ಆಚರಣೆಯ ಜಾನಪದ ನೃತ್ಯ) ಮತ್ತು ಜನಪದ ಹಾಡುಗಳನ್ನು ಪೋಷಿಸಲು ಅವರು ಕೆಲಸ ಮಾಡುತ್ತಿದ್ದಾರೆ. 2019 ರಲ್ಲಿ ಅವರು ಜನಪದ ಲೋಕ (ಕರ್ನಾಟಕ ಜನಪದ ಅಕಾಡೆಮಿ) ಯ ಮೊದಲ ಲಿಂಗಾಯತ ಅಧ್ಯಕ್ಷರಾದರು. ತ್ವರಿತ ಸಂಗತಿಗಳು: ಜನನ, ಅಡ್ಡಹೆಸರು …ಮಂಜಮ್ಮ ಜೋಗತಿಹುಟ್ಟುಮಂಜುನಾಥ್ ಶೆಟ್ಟಿ1957 (ವಯಸ್ಸು 63-64)ಕಲ್ಲುಕಂಬ, ಬಳ್ಳಾರಿ, ಕರ್ನಾಟಕ, ಭಾರತಅಡ್ಡಹೆಸರುಮಂಜವ್ವಉದ್ಯೋಗಜಾನಪದ ಕಲಾವಿದಗಮನಾರ್ಹ ಪ್ರಶಸ್ತಿಗಳುಪದ್ಮಶ್ರೀ,ಕನ್ನಡ ರಾಜ್ಯೋತ್ಸವ ಪ್ರಶಸ್ತಿ,ಜನಪದ ಲೋಕಾ ಪ್ರಶಸ್ತಿಮುಚ್ಚಿವೈಯಕ್ತಿಕ ಜೀವನಆಕೆ ತನ್ನ ಹೆತ್ತವರಿಗೆ ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಮಂಜುನಾಥ್ ಶೆಟ್ಟಿ ಆಗಿ ಜನಿಸಿದಳು. ಆದಾಗ್ಯೂ, 15 ನೇ ವಯಸ್ಸಿಗೆ, ಅವಳು ತನ್ನನ್ನು ತಾನು ಮಹಿಳೆ ಎಂದು…

Read More
ಸುದ್ದಿ 

ಪ್ರಾಥಮಿಕ ಆರೋಗ್ಯ ಕೇಂದ್ರ ಸಹಕಾರ ನಗರ ಪಲ್ಸ್ ಪೊಲಿಯೋ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಮಾಹಿತಿ ನೀಡುತ್ತಿರುವ ವೈಧ್ಯಾಧಿಕಾರಿಗಳಾದ ಡಾ.ಪುಷ್ಪಲತಾ..

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

Read More
ಸುದ್ದಿ 

ಅನೇಕಲ್ ಫಾರ್ಮ ಹೌಸ್ ಬದಲಿಗೆ ದೇವನಹಳ್ಳಿ ರೆಸಾರ್ಟಿಗೆ ಶಶಿಕಲಾ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಅನೇಕಲ್ ಜನವರಿ 31: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ಶಶಿಕಲಾ ನಟರಾಜನ್ ಅವರು ಜೈಲು ಹಾಗೂ ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಎಲ್ಲಿಗೆ ತೆರಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಕೊವಿಡ್ 19 ನಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಶಶಿಕಲಾ ಅವರು ಇನ್ನಷ್ಟು ಕಾಲ ಬೆಂಗಳೂರಿನಲ್ಲೇ ನೆಲೆಸಲಿದ್ದಾರೆ. ಆದರೆ, ಆನೇಕಲ್ ಸಮೀಪದ ಫಾರ್ಮ್ ಹೌಸ್ ಬದಲಿಗೆ ದೇವನಹಳ್ಳಿಯ ರೆಸಾರ್ಟಿಗೆ ಶಶಿಕಲಾ ಹಾಗೂ ಪರಿವಾರ ತೆರಳಿದೆ.ವಿಕ್ಟೋರಿಯಾ ಅಸ್ಪತ್ರೆಯಿಂದ ಡಿಸ್ಚಾರ್ಜ್ ಅಗರುವ ವಿ ಕೆ ಶಶಿಕಲಾ ಅವರು ಡಿಸ್ಚಾರ್ಜ್ ಆದ ಬಳಿಕ ಕೆಲ ದಿನಗಳ ಕಾಲ ಬೆಂಗಳೂರಿನಲ್ಲೆ ವಿಶ್ರಾಂತಿ ಪಡೆಯಲಿದ್ದಾರೆ. ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ – ಆನೇಕಲ್ ಸಮೀಪದ ಫಾರ್ಮ್ ಹೌಸ್‌ನಲ್ಲಿ ಶಶಿಕಲಾ ಹಾಗೂ ಆಪ್ತರು ತಂಗಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ, ದೇವನಹಳ್ಳಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟಿಗೆ ಶಶಿಕಲಾ ಆಗಮಿಸಿದ್ದಾರೆ.”ವೈದ್ಯರ ಸಲಹೆ ಮೇರೆಗೆ ಶಶಿಕಲಾ ಅವರು…

Read More
ಸುದ್ದಿ 

ಬೈಲಹೊಂಗಲ :ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. . ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕಿನ ಸಿದ್ಧಸಮುದ್ರ ಗ್ರಾಮದಲ್ಲಿ ಇಂದು 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬೈಲಹೊಂಗಲ ತಾಲೂಕಿನ ಸಿದ್ಧಸಮುದ್ರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಂದ ಪಲ್ಸ್ ಪೋಲಿಯೊ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಸದಸ್ಯ ಸಿದ್ದಪ್ಪ ನಂದಿಹಳ್ಳಿ ಮಾತನಾಡಿ ಪಲ್ಸ್ ಪೋಲಿಯೊ ಲಸಿಕೆ ಮಕ್ಕಳಿಗೆ ಹಾಕಿಸುವ ಮುಖಾಂತರ ಪೋಲಿಯೊ ಮುಕ್ತ ಮಾಡಲು ಊರಲ್ಲಿರುವ ಐದು ವರ್ಷಗಳ ಒಳಗಿನ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸಿ ಎಂದುಹೇಳಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ದುರ್ಗವ್ವ ಮಾದರ, ಫಕ್ಕೀರವ್ವ ಕರೀಕಟ್ಟಿ, ಬಾಳವ್ವ ಅಬ್ಬಾರ, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.…

Read More
ವಾಣಿಜ್ಯ ವಿಶೇಷ ಸುದ್ದಿ 

ಅನೇಕಲ್ ತಾಲ್ಲೂಕಿನ ಜಿಗಳ ಗ್ರಾಮದಲ್ಲಿ ಸುಗ್ಗಿ ಹಬ್ಬದ ಸಡಗರ

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಆನೇಕಲ್: ಗ್ರಾಮೀಣ ಸೊಗಡಿನ ಕಾರ್ಯಕ್ರಮಗಳಾದ ಜಾತ್ರೆ, ಉತ್ಸವ, ಹಬ್ಬಗಳು ಜನರು ಪರಸ್ಪರ ಅರಿತುಕೊಳ್ಳಲು ಕಷ್ಟ, ಸುಖಗಳಿಗೆ ಸ್ಪಂದಿಸಲು ಉತ್ತಮ ವೇದಿಕೆಗಳಾಗಿವೆ ಎಂದು ನಿವೃತ್ತ ಐಪಿಎಸ್‌ ಅಧಿಕಾರಿ ಕೆ.ವಿ.ಆರ್‌. ಟ್ಯಾಗೋರ್‌ ತಿಳಿಸಿದರು.ಅವರು ತಾಲ್ಲೂಕಿನ ಜಿಗಳ ಗ್ರಾಮದಲ್ಲಿ ಭಾರತೀಯ ಕಿಸಾನ್‌ ಸಂಘದ ದಕ್ಷಿಣ ಪ್ರಾಂತ್ಯ ಆನೇಕಲ್‌ ಘಟಕದಿಂದ ಆಯೋಜಿಸಿದ್ದ ಸುಗ್ಗಿ ಹಬ್ಬ-2021 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಗ್ರಾಮಗಳಲ್ಲಿ ಈ ಹಿಂದೆ ಸುಗ್ಗಿ ಕಾಲ ಮುಗಿಯುತ್ತಿದ್ದಂತೆ ಹಬ್ಬಗಳ ಕಾಲ ಪ್ರಾರಂಭವಾಗುತ್ತಿತ್ತು. ಪ್ರತಿಯೊಂದು ಹಬ್ಬ, ಉತ್ಸವಗಳಲ್ಲೂ ಗ್ರಾಮದ ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಉತ್ಸವಗಳ ಸೊಗಡು ಮಾಯವಾಗುತ್ತಿದೆ. ಪರಸ್ಪರ ವಿಶ್ವಾಸ, ಸಹಕಾರ, ಮನೋಭಾವನೆ ಮೂಡಲು ಉಪಯುಕ್ತವಾಗಿವೆ. ನಗರೀಕರಣದ ಪ್ರಭಾವದಿಂದಾಗಿ ಗ್ರಾಮೀಣ ಸಂಸ್ಕೃತಿ ಕಣ್ಮರೆಯಾಗುತ್ತಿದೆ. ಗ್ರಾಮೀಣ ಸಂಸ್ಕೃತಿ, ಪರಂಪರೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೋಲಾಟ, ಹಗ್ಗಜಗ್ಗಾಟ, ರಂಗೋಲಿ ಸ್ಪರ್ಧೆ, ಭಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸುಗ್ಗಿ…

Read More
ಸುದ್ದಿ 

ಅನಧಿಕೃತ ಬಣ್ಣದ ಕಾರ್ಖಾನೆ ಘಟಕ ತೆರವು.

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಆನೇಕಲ್: ತಾಲ್ಲೂಕಿನ ಮುಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಗುಡಿಗಟ್ಟನಹಳ್ಳಿ ಮತ್ತು ಮಟ್ಟನಹಳ್ಳಿ ಗ್ರಾಮಗಳಲ್ಲಿ ಅನಧಿಕೃತವಾಗಿ ಬಟ್ಟೆಗೆ ಬಣ್ಣ ಹಾಕುವ ಘಟಕ ಸ್ಥಾಪಿಸಿ ತ್ಯಾಜ್ಯ ನೀರು ರಾಜಕಾಲುವೆಗಳ ಮೂಲಕ ದಕ್ಷಿಣ ಪಿನಾಕಿನಿ ನದಿ ಮತ್ತು ಕೆರೆಗಳಿಗೆ ಬಿಡಲಾಗುತ್ತಿದ್ದ ಹಿನ್ನೆಲೆಯಲ್ಲಿ ಕಂದಾಯ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಘಟಕ ತೆರವುಗೊಳಿಸಿದ್ದಾರೆ. ತಹಶೀಲ್ದಾರ್‌ ಸಿ.ಮಹಾದೇವಯ್ಯ ಮಾತನಾಡಿ, ಮಟ್ಟನಹಳ್ಳಿ ಗ್ರಾಮದ ಸರ್ವೆ ನಂ.90ರಲ್ಲಿ ತಮಿಳುನಾಡು ಮೂಲದ ಲಕ್ಷ್ಮಣ್ಣಪ್ಪ ಮತ್ತು ಗುಡಿಗಟ್ಟನಹಳ್ಳಿ ಗ್ರಾಮದ ಸರ್ವೆ 123 ಮತ್ತು 124ರಲ್ಲಿ ಬಟ್ಟೆಗೆ ಬಣ್ಣ ಹಾಕುವ ಘಟಕ ಸ್ಥಾಪಿಸಿ ಘಟಕಗಳಿಂದ ತ್ಯಾಜ್ಯ ನೀರು ಸಂಸ್ಕರಿಸದೆ ನೇರವಾಗಿ ಕೆರೆ ಮತ್ತು ನದಿ ಮೂಲಗಳಿಗೆ ಹರಿಸುತ್ತಿರುವುದರಿಂದ ಅಂತರ್ಜಲ ಕಲುಷಿತವಾಗಿದೆ ಮತ್ತು ಪ್ರಾಣಿ ಪಕ್ಷಿಗಳು ನೀರು ಕುಡಿದು ಸಾವನ್ನಪ್ಪಿರುವ ಘಟನೆ ನಡೆದಿವೆ ಎಂದು ಸ್ಥಳೀಯರು ದೂರು…

Read More
ಸುದ್ದಿ 

” ದುರ್ಬಲರಿಗೆ ನ್ಯಾಯ ಒದಗಿಸಿ “

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .

ನಿಮ್ಮ ತಾಲ್ಲೂಕು ಸ್ನೇಹಿತರಿಗೆ ಕಳುಹಿಸಿ.. .ಆನೇಕಲ್: ಸಾರ್ವನಿಕರು ಸಮಾಜದಲ್ಲಿ ಯಾವುದೇ ಅಡೆ ತಡೆಯಿಲ್ಲದೆ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕ. ಶೋಷಿತರಿಗೆ, ಹಿಂದುಳಿದವರಿಗೆ ಮತ್ತು ದುರ್ಬಲರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮಾನವ ಹಕ್ಕುಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಪಿ.ಈಶ್ವರ ಭಟ್‌ ತಿಳಿಸಿದರು.ಅವರು ತಾಲ್ಲೂಕಿನ ಎಲೆಕ್ಟ್ರಾನಿಕ್‌ಸಿಟಿ ಐಎಸ್‌ಬಿಆರ್ ಕಾನೂನು ಕಾಲೇಜಿನಲ್ಲಿ ಆಯೋಜಿಸಿದ್ದ ಮಾನವ ಹಕ್ಕುಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಭಗವದ್ಗೀತೆ, ಬೈಬಲ್‌, ಕುರಾನ್‌ ಸೇರಿದಂತೆ ವಿವಿಧ ಧಾರ್ಮಿಕ ಗ್ರಂಥಗಳಲ್ಲಿ ಮಾನವ ಹಕ್ಕುಗಳ ರಕ್ಷಣೆ ಬಗ್ಗೆ ಉಲ್ಲೇಖವಿದೆ. ಧರ್ಮದ ಮೂಲ ಸಮಾನತೆಯಾಗಿದೆ. ಕಾನೂನಿನ ಮೂಲಕ ಎಲ್ಲರಿಗೂ ಸಮಾನತೆ ದೊರಯುವಂತೆ ಆಗಿರುವುದು ಕಾನೂನಿನ ಹೆಗ್ಗಳಿಕೆಯಾಗಿದೆ.ಸಮಾಜದ ಪ್ರತಿಯೊಬ್ಬರು ಕಾನೂನು ಪರಿಪಾಲನೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಬೇಕು ಎಂದರು. ಐಎಸ್‌ಬಿಆರ್‌ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಮನೀಷ್‌ ಕೊಠಾರಿ ಮಾತನಾಡಿ, ಭಾರತ ಕಂಡ ಶ್ರೇಷ್ಠ…

Read More