ಬೆಳ್ತಂಗಡಿ | ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿವಾದ – ಸೌಹಾರ್ದ ಮಾತುಕತೆಯಿಂದ ಅಂತ್ಯ
Taluknewsmedia.comಬೆಳ್ತಂಗಡಿ | ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿವಾದ – ಸೌಹಾರ್ದ ಮಾತುಕತೆಯಿಂದ ಅಂತ್ಯ ಬೆಳ್ತಂಗಡಿ, : ಅಳದಂಗಡಿಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ಮುಸ್ಲಿಮ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಶಾಲಾ ಆಡಳಿತ ಮಂಡಳಿ ಹಾಗೂ ಸಮುದಾಯದ ಮುಖಂಡರ ನಡುವೆ ನಡೆದ ಚರ್ಚೆಯಿಂದ ವಿವಾದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಾಗಿದೆ. ಅಳದಂಗಡಿಯ ಸೈಂಟ್ ಪೀಟರ್ ಇಂಗ್ಲಿಷ್ ಮೀಡಿಯಂ ಶಾಲೆಯ ವಾರ್ಷಿಕೋತ್ಸವದಲ್ಲಿ ಪ್ರದರ್ಶಿಸಲಾದ ನೃತ್ಯ ರೂಪಕದಲ್ಲಿ ಪಹಲ್ಗಾಮ್ ದಾಳಿಯನ್ನು ಆಧಾರವಾಗಿಟ್ಟುಕೊಂಡ ದೃಶ್ಯಾವಳಿಗಳಲ್ಲಿ ಮುಸ್ಲಿಮರ ಧಾರ್ಮಿಕ ಉಡುಪುಗಳ ಬಳಕೆ ಮಾಡಿರುವುದು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ ಹಾಗೂ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದೆ ಎಂದು ಮುಸ್ಲಿಮ್ ಸಮುದಾಯದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಶಾಲೆಯ ಸಂಚಾಲಕ ಫಾ. ಎಲ್ಯಾಸ್ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ಮುಸ್ಲಿಮ್ ಸಮುದಾಯದ ಮುಖಂಡರು, ಧರ್ಮಗುರುಗಳು ಮತ್ತು…
ಮುಂದೆ ಓದಿ..
