ಸುದ್ದಿ 

” ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ “

Taluknewsmedia.com

Taluknewsmedia.comಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್…… ಆದ್ದರಿಂದ…… ಸಾವಿನ ಭಯದಿಂದ ತಪ್ಪು ಮಾಡುವುದು ಬಿಡಿ….. ಸೋಲಿನ ಭಯದಿಂದ ಚಿಂತಿಸುವುದನ್ನು ಬಿಡಿ……. ವಿಫಲತೆಯ ಭಯದಿಂದ ಕೊರಗುವುದನ್ನು ಬಿಡಿ…… ಸಾವು – ಸೋಲು – ವಿಫಲತೆಯ ಭಯ ನಮ್ಮನ್ನು ಜೀವನ ಪೂರ್ತಿ ಹಿಂಡುತ್ತಲೇ ಇರುತ್ತದೆ. ನಾವು ಮಾಡುವ ಬಹುತೇಕ ತಪ್ಪುಗಳು ಇವುಗಳ ಕಾರಣಕ್ಕಾಗಿಯೇ ಆಗಿರುತ್ತದೆ.ಆಸ್ಪತ್ರೆ, ಪೋಲೀಸ್, ನ್ಯಾಯಾಲಯ, ದೇವರು, ಧರ್ಮ, ಸ್ವಾಮಿಗಳು ಎಲ್ಲವುಗಳ ಸುತ್ತ ನಾವು ಸುತ್ತುವುದು ಮತ್ತು ಅನೇಕ ಭ್ರಮಾತ್ಮಕ ಮೌಢ್ಯಗಳಿಗೆ ಒಳಗಾಗುವುದು ಸಹ ಈ ಮೂರರ ಕಾರಣಕ್ಕಾಗಿ.ಇವುಗಳನ್ನು ಘನತೆಯಿಂದ ಸ್ವೀಕರಿಸುವ, ವಾಸ್ತವವಾಗಿ ಎದುರಿಸುವ, ಸಹಜವಾದ ಕ್ರಿಯೆ ಎನ್ನುವ ಸಾಮಾಜಿಕ ವಾತಾವರಣ ನಮ್ಮ ವ್ಯವಸ್ಥೆಯಲ್ಲಿ ಇಲ್ಲ.ಮನುಷ್ಯ ಸಂಘ ಜೀವಿ. ಒಂದು ವೇಳೆ ವೈಯಕ್ತಿಕ ನೆಲೆಯಲ್ಲಿ ಇವುಗಳನ್ನು ಸ್ವಾಭಾವಿಕವಾಗಿ ಒಪ್ಪಿಕೊಂಡರು ನಮ್ಮ ಸುತ್ತಮುತ್ತಲಿನ ಜನರ ಪ್ರತಿಕ್ರಿಯೆ ಅತ್ಯಂತ ನಕಾರಾತ್ಮಕವಾಗಿ ಇರುತ್ತದೆ. ಅದನ್ನು ಎದುರಿಸುವುದೇ ಒಂದು ದೊಡ್ಡ ಸವಾಲು.ಇದು ಹೇಳುವಷ್ಟು ಸುಲಭವಲ್ಲ. ಆದರೆ…

ಮುಂದೆ ಓದಿ..
ಸುದ್ದಿ 

ಬಾಲಕನ ಅಪಹರಿಸಿ ಬರ್ಬರ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು..

Taluknewsmedia.com

Taluknewsmedia.comಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ನಿಶ್ಚಿತ್‌ನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಗಳಾಗಿ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದಾಗ, ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್ಐ ಅರವಿಂದ್ ಕುಮಾರ್ ಅವರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.ಘಟನೆಯಲ್ಲಿ ಗುರುಮೂರ್ತಿಯ ಎರಡೂ ಕಾಲುಗಳು ಮತ್ತು ಗೋಪಾಲಕೃಷ್ಣನ ಒಂದು ಕಾಲಿಗೆ ಗುಂಡು ತಗುಲಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಬೆಂಗಳೂರು ಅರಕೆರೆಯ ಶಾಂತಿನಿಕೇತನ ಲೇಔಟ್‌ನಲ್ಲಿ ನಿಶ್ಚಿತ್ ಮತ್ತು ಅವನ ಪೋಷಕರು ವಾಸಿಸುತ್ತಿದ್ದರು. ನಿಶ್ಚಿತ್‌ನ ತಂದೆ ನಗರದ ಪ್ರತಿಷ್ಠಿತ…

ಮುಂದೆ ಓದಿ..